ಬೆಂಗಳೂರು:  ರಾಜ್ಯದಲ್ಲಿ ನಶಿಸುತ್ತಿರುವ ಔಷಧೀಯ ಸಸ್ಯಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಎಷ್ಟು ಬೇಕಾದರೂ ಹಣ ಬಿಡುಗಡೆ ಮಾಡಲು ತಾವು ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಲ್ಲಿ ಹೇಳಿದರು.

‘ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಸಸಿಗಳನ್ನು ನೆಡಲು ಸ್ಥಳವನ್ನು ಗುರುತಿಸಿ. ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಇದು ಸುಸಮಯ. ಹಣವನ್ನು ಸರ್ಕಾರ ಮಂಜೂರು ಮಾಡುತ್ತದೆ. ಹೆದರಬೇಡಿ’ ಎಂದು ಅವರು ಆಶ್ವಾಸನೆ ನೀಡಿದರು.

‘ಅರಣ್ಯ ಕೃಷಿ ಪ್ರೋತ್ಸಾಹ ಯೋಜನೆಯಲ್ಲಿ ಔಷಧೀಯ ಸಸ್ಯಗಳ ಅಭಿವೃದ್ಧಿ’ ಕುರಿತು ಸೋಮವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.ಆರೋಗ್ಯಕ್ಕಾಗಿ ಔಷಧೀಯ ಸಸ್ಯಗಳ ಬಳಕೆಯಾಗುವ ಬದಲು ಹಣಕ್ಕಾಗಿ ಇದನ್ನು ಉಪಯೋಗಿಸುತ್ತಿ ದ್ದಾರೆ.ಇದರಿಂದ ಪರಿಸರ ನಾಶವಾಗುತ್ತಿದೆ. ಕಾಣದ ಶಕ್ತಿ ಅರಣ್ಯ ನಾಶಕ್ಕೆ ಮುಂದಾಗಿದೆ. ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದರು.

‘ಶಾಲಾ- ಕಾಲೇಜುಗಳ ಮಟ್ಟದಲ್ಲಿ ಅರಣ್ಯ ರಕ್ಷಣೆಯ ಬಗ್ಗೆ ಪಾಠ ಮಾಡಬೇಕು. ಆದರೆ ಈ ನಿಟ್ಟಿನಲ್ಲಿ ನಾವು ಹಿಂದೆ ಬಿದ್ದಿದ್ದೇವೆ. ಕೃಷಿ ವಿಶ್ವವಿದ್ಯಾಲಯ ಬಹಳಷ್ಟು ಸುಧಾರಿಸಬೇಕು. ವಿ.ವಿಯ ವಿಶಾಲ ಆವರಣದಲ್ಲಿ ಅಗತ್ಯ ಇರುವಷ್ಟು ಸಸಿಗಳನ್ನು ನೆಟ್ಟು ಅವುಗಳನ್ನು ರೈತರಿಗೆ ನೀಡುವ ವಾತಾವರಣ ನಿರ್ಮಾಣವಾಗಬೇಕು. ಆದರೆ ಈಗಿನ ಪರಿಸ್ಥಿತಿಯಲ್ಲಿ ಸಾಕಷ್ಟು ಹಣ ವಿನಿಯೋಗ ಆಗುತ್ತಿದ್ದರೂ, ಅದರ ಸದ್ಬಳಕೆ ಆಗುತ್ತಿಲ್ಲ’ ಎಂದರು.

ಅರಣ್ಯ ಸಚಿವ ಸಿ.ಎಚ್.ವಿಜಯಶಂಕರ ಮಾತನಾಡಿ, ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಕೃಷಿ ಪ್ರೋತ್ಸಾಹ ಯೋಜನೆ’ಯನ್ನು ರಾಜ್ಯ ಸರ್ಕಾರ ಆರಂಭಿಸಿದೆ. ರೈತರು ಬಯಸಿರುವ ಸಸಿಗಳನ್ನು ಅಭಿವೃದ್ಧಿಪಡಿಸಿ ಅವರಿಗೆ ಕೊಡಲು ಅರಣ್ಯ ಇಲಾಖೆ ಸಿದ್ಧವಿದೆ.

ಖಾಸಗಿ ಉದ್ದಿಮೆಗಳು ಮುಂದೆ ಬಂದರೆ ಅವುಗಳಿಗೆ ಕಚ್ಚಾ ಪದಾರ್ಥಗಳನ್ನು ಬೇಕಿದ್ದರೆ ಪೂರೈಸುವುದರ ಮೂಲಕ ಅವುಗಳ ಜೊತೆ ಒಪ್ಪಂದ ಮಾಡಿಕೊಂಡು ಕೃಷಿ ಕ್ಷೇತ್ರವನ್ನು ಮುನ್ನಡೆಸಲು ಇಲಾಖೆ ತಯಾರಿದೆ ಎಂದರು.

ಇದೇ ವೇಳೆ, ಸಾಲುಮರದ ತಿಮ್ಮಕ್ಕ ಅವರಿಗೆ ಒಂದು ಲಕ್ಷ ರೂಪಾಯಿ ನಗದು ನೀಡಿ ಮುಖ್ಯಮಂತ್ರಿಗಳು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಜಿ.ಶಿವಾನಂದ ಮೂರ್ತಿ, ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬಿ.ಬಸಪ್ಪ, ಎಂ.ಆರ್ಕರ್ಕಿ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕೌಶಿಕ್ ಮುಖರ್ಜಿ, ಅರಣ್ಯ ಮತ್ತು ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಆಶೀಸರ ಮುಂತಾದವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.