ಗಂಡಸಿ (ಅರಸೀಕೆರೆ): ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕೀಯ ಹಸ್ತಕ್ಷೇಪ ಕಂಡು ಬಂದರೆ ತಾವು ಸಹಿಸುವುದಿಲ್ಲ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಎಚ್ಚರಿಸಿದ್ದಾರೆ

ಸೋಮವಾರ ಸಂಜೆ ಗಂಡಸಿ ಹೋಬಳಿಯ ಕೊಂಡೇನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸರ್ಕಾರದ ವಿವಿಧ ಯೋಜನೆಯಡಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ, ಕೆರೆ, ಸಮುದಾಯ ಭವನ ಮತ್ತು ಶಾಲಾ ಕಟ್ಟಡಗಳ ಕಾಮಗಾರಿಗಳಿಗೆ ಶಾಸಕ ಶಿವಲಿಂಗೇಗೌಡ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಗುತ್ತಿಗೆದಾರರು ಕಾಮಗಾರಿಗಳ ಗುಣ ಮಟ್ಟಕ್ಕೆ ಹೆಚ್ಚಿನ ಕಾಳಜಿ ವಹಿಸಿ ಕರ್ತವ್ಯ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ಅವರು ತಾಕೀತು ಮಾಡಿದರು.

ಇದಕ್ಕೂ ಮುನ್ನ ಶಾಸಕರು ಕೊಂಡೇನಾಳು ಗ್ರಾಮ ಪಂಚಾಯಿತಿಗೆ ಸೇರಿದ ವಡಗರಹಳ್ಳಿ ಕೆರೆ ಅಭಿವೃದ್ಧಿಗೆ 25 ಲಕ್ಷ ರೂ, ಕೋಂಡೇನಾಳು ಊರ ಮುಂದಿನ ಕೆರೆ ಅಭಿವೃದ್ಧಿ ಕಾಮಗಾರಿಗೆ 25 ಲಕ್ಷ ರೂ, ಉಗ್ರನಹಳ್ಳಿ ಗ್ರಾಮದಲ್ಲಿ ಸಮುದಾಯ ಭವನ 12 ಲಕ್ಷ ರೂ, ನಾಗತಿ ಕೆರೆ ಅಭಿವೃದ್ಧಿ 25 ಲಕ್ಷ ರೂ, ಹುಲ್ಲೇ ಕೆರೆ ಗ್ರಾಮದ ಪರಿಮಿತಿಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗೆ 20ಲಕ್ಷ ರೂ, ಇದೇ ಗ್ರಾಮದಲ್ಲಿ ಒವರ್ ಹೆಡ್ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ 10 ಲಕ್ಷ ರೂ, ಗೌರಮ್ಮ ಕಟ್ಟೆ ಗ್ರಾಮದಲ್ಲಿ ಕಾಂಕ್ರಿಟ್ ರಸ್ತೆ ಅಭಿವೃದ್ಧಿಗೆ 12 ಲಕ್ಷ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ 5 ಲಕ್ಷ ರೂ, ಕಾಡಯ್ಯನ ಕೊಪ್ಪಲು ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ, ಈಡಿಗರ ಹಟ್ಟಿಯಿಂದ ಮಾರಶೆಟ್ಟಿಹಳ್ಳಿ ಮಾರ್ಗವಾಗಿ ಟಿ.ಡಿ ರಸ್ತೆವರೆಗೆ 150 ಲಕ್ಷ ರೂ, ಮಾರಶೆಟ್ಟಿಹಳ್ಳಿ ರಸ್ತೆ ಯಿಂದ ಕೊಪ್ಪಲು ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ, ಮಾರಶೆಟ್ಟಿಹಳ್ಳಿ ಎಸ್.ಸಿ ಕಾಲೊನಿಗೆ ಕಾಂಕ್ರಿಟ್ ರಸ್ತೆ ಅಭಿವೃದ್ಧಿಗೆ 12 ಲಕ್ಷ ರೂಪಾಯಿ ಮಾರಶೆಟ್ಟಿ ಹಳ್ಳಿ ಕೆರೆ ಅಭಿವೃದ್ಧಿಗೆ 25 ಲಕ್ಷ ಹಾಗೂ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ 3 ಲಕ್ಷ ರೂಪಾಯಿ ಬಿಡುಗಡೆಯಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಹುಚ್ಚೇಗೌಡ, ಜ್ಯೋತಿ ಗಂಗಾಧರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ್, ಉಪಾಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಎಪಿಎಂಸಿ ಸದಸ್ಯರಾದ ಕುಶಾಲ್ಬಾಬು, ಸುಮಾ ರವಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಲೀಲಾ ಜಯರಾಂ, ಮಾನಸ ಜಗದೀಶ್, ಸುಧಾಕರ್, ಹನುಮೇಗೌಡ, ಕೊಂಡೇನಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಬಸವರಾಜು, ಸದಸ್ಯ ಎಮಬಿ ಪಟೇಲ್ಪ್ರಸಾದ್, ಗಾಯಿತ್ರಿ, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.