ಶನಿವಾರ, ಮೇ 21, 2022
26 °C

ಅಭಿವೃದ್ಧಿಶೀಲ ದೇಶಗಳ ಹಿತಕ್ಕೆ ಧಕ್ಕೆ-ಐಎಂಎಫ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪ್ಯಾರಿಸ್ (ಐಎಎನ್‌ಎಸ್): ಅಭಿವೃದ್ಧಿ ಹೊಂದಿದ ದೇಶಗಳ ಹಣಕಾಸು ಬಿಕ್ಕಟ್ಟು ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಆರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟೀನ್ ಲಗಾರ್ಡೆ ಅಭಿಪ್ರಾಯಪಟ್ಟಿದ್ದಾರೆ.

ಪ್ರಪಂಚದ ಪ್ರಮುಖ ಆರ್ಥಿಕ ದೇಶಗಳ ಸದ್ಯದ ಹಣಕಾಸು ಬಿಕ್ಕಟ್ಟು, ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಅದರಲ್ಲೂ ಕಳೆದ ಮೂರು ವಾರಗಳಲ್ಲಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಹೇಳಿದ್ದಾರೆ.

ಉತ್ತಮ ಪರಿಸ್ಥಿತಿಯಲ್ಲಿ ಇದ್ದರೂ,  ಜಾಗತಿಕ ಅರ್ಥಿಕ ಬಿಕ್ಕಟ್ಟಿನ ಬಲಿಪಶುಗಳಾಗಬೇಕಾಗಿ ಬಂದಿರುವ ಜಗತ್ತಿನ ಹಲವು ದೇಶಗಳ ಆರ್ಥಿಕ ಪ್ರಗತಿಗೆ ಸಂಬಂಧಿಸಿದಂತೆ  ಐಎಂಎಫ್ `ನಿರ್ದಿಷ್ಟ ಪ್ರಸ್ತಾವವೊಂದನ್ನು ಮುಂದಿನ `ಜಿ-20~ ಶೃಂಗಸಭೆಯಲ್ಲಿ ಮಂಡಿಸಲಿದೆ. ಈ ಪ್ರಸ್ತಾವವು ಪ್ರವರ್ಧಮಾಕ್ಕೆ ಬರುತ್ತಿರುವ ದೇಶಗಳು ಬಿಕ್ಕಟ್ಟು ಪೂರ್ವದಲ್ಲಿ ಕೈಗೊಳ್ಳಬೇಕಾದ ಅಲ್ಪಾವಧಿ ಮುನ್ನೆಚ್ಚರಿಕೆ ಕ್ರಮಗಳನ್ನು ಒಳಗೊಂಡಿದೆ ಎಂದರು.

`ಐಎಂಎಫ್~ ಸದಸ್ಯ ರಾಷ್ಟ್ರಗಳು ಜಾಗತಿಕ ಆರ್ಥಿಕತೆಗೆ ಶೇ 80ರಷ್ಟು ಕೊಡುಗೆ ನೀಡುತ್ತಿವೆ. ಪ್ರಮುಖ ಆರ್ಥಿಕ ಶಕ್ತಿಗಳಾದ ಈ ರಾಷ್ಟ್ರಗಳು ಅಂತರರಾಷ್ಟೀಯ ಹಣಕಾಸು ನಿಧಿಯನ್ನು ಬಲಪಡಿಸುವಲ್ಲಿ ತೆಗೆದುಕೊಳ್ಳಬೇಕಾದ ಇತರ ಕ್ರಮಗಳ ಕುರಿತೂ ಪ್ಯಾರಿಸ್‌ನಲ್ಲಿ ನಡೆದ `ಜಿ-20~ ವಾಣಿಜ್ಯ ಸಚಿವರ ಸಭೆಯಲ್ಲಿ ಚರ್ಚಿಸಲಾಯಿತು. ಈ ದೇಶಗಳು ನಿರ್ಧಾರ ಕೈಗೊಳ್ಳುವಲ್ಲಿ ಮತ್ತು ಹಣಕಾಸು ವಹಿವಾಟಿನಲ್ಲಿ ಇನ್ನಷ್ಟು ಪ್ರಮುಖ ಪಾತ್ರವನ್ನು ನಿರ್ವಹಿಸಬೇಕು ಎಂದು ಲಗಾರ್ಡೆ ಹೇಳಿದರು.

`ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಚೀನಾ ಮತ್ತು ಬ್ರೆಜಿಲ್ ಕರೆನ್ಸಿಗಳನ್ನೂ ಸೇರ್ಪಡೆಗೊಳಿಸಲಾಗುತ್ತಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.