ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಬುಧವಾರ, ಜೂಲೈ 17, 2019
30 °C

ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

Published:
Updated:

ಯಲಹಂಕ: ಸರ್ವಜ್ಞನಗರ ಕ್ಷೇತ್ರದ ಎಚ್‌ಬಿಆರ್ ವಾರ್ಡ್ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ 2.80 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಗೃಹ ಸಚಿವ ಕೆ.ಜೆ.ಜಾರ್ಜ್ ಈಚೆಗೆ ಗುದ್ದಲಿಪೂಜೆ ನೆರವೇರಿಸಿದರು.ಬೈರವೇಶ್ವರ ಬಡಾವಣೆಯಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲು ಆಗಮಿಸಿದ ಸಚಿವರಲ್ಲಿ, `ತೆರೆದ ಚರಂಡಿಯಲ್ಲಿ ಹೂಳು ತೆಗೆಯದೆ ಸ್ಲ್ಯಾಬ್ ಅಳವಡಿಸಿ, ಕಳಪೆ ಕಾಮಗಾರಿ ಮಾಡಲಾಗಿದೆ' ಎಂದು ಸ್ಥಳೀಯರು ದೂರಿದರು. ಕೂಡಲೇ ಬಿಲ್ ತಡೆಹಿಡಿಯುವಂತೆ ಪಾಲಿಕೆ ಸಹಾಯಕ ಎಂಜಿನಿಯರ್ ಜಗದೀಶ ಅವರಿಗೆ ಸಚಿವರು ಸೂಚಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry