ಗುರುವಾರ , ಜನವರಿ 23, 2020
28 °C

ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹದೇವಪುರ: ಕ್ಷೇತ್ರದ ಸಿಗೇಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ತಾಲ್ಲೂಕು ಪಂಚಾಯ್ತಿ ಅನುದಾನದಡಿಯಲ್ಲಿ ನೂತನ ಶಾಲಾ ಕಟ್ಟಡ, ಅಂಗನವಾಡಿ ಕಟ್ಟಡ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.ಶಾಸಕ ಅರವಿಂದ ಲಿಂಬಾವಳಿ ಗುದ್ದಲಿ ಪೂಜೆ ನೆರವೇರಿಸಿ, ‘ಗುತ್ತಿಗೆದಾರರು ಆದಷ್ಟು ಬೇಗನೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಉತ್ತಮ ಗುಣಮಟ್ಟ ಕಾಪಾಡಿಕೊಂಡು ಕೆಲಸ ಮಾಡಬೇಕು’ ಎಂದು ತಿಳಿಸಿದರು. ತಾಲ್ಲೂಕು ಪಂಚಾಯ್ತಿ ಅನುದಾನದ ಅಡಿಯಲ್ಲಿ ₨5.45 ಲಕ್ಷ ವೆಚ್ಚದಲ್ಲಿ ಶಾಲಾ ಕಟ್ಟಡ, ₨5 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ಹಾಗೂ ₨7 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಎನ್‌.ಸಿ.ಕೃಷ್ಣಪ್ಪ, ಸದಸ್ಯ ರಮೇಶ ಎಸ್‌, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎನ್‌.ರಾಮಮೂರ್ತಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)