ಶುಕ್ರವಾರ, ಜನವರಿ 27, 2023
20 °C

ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ :ಶೋಭಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ :ಶೋಭಾ

ರಾಜರಾಜೇಶ್ವರಿನಗರ: ‘ಕ್ಷೇತ್ರದ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಿಗೆ ಅದ್ಯತೆ ನೀಡಲಾಗಿದೆ’ ಎಂದು ಆಹಾರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಬಿಬಿಎಂಪಿ ವತಿಯಿಂದ ಕೈಗೊಂಡಿರುವ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿನ ಬಿಜಿಎಸ್ ಆಸ್ಪತ್ರೆಯ ಸುತ್ತಮುತ್ತಲ  ರಸ್ತೆಗಳ ಅಭಿವೃದ್ದಿ ಕಾಮಗಾರಿಗೆ ರೂ 4.50 ಕೋಟಿ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ ನೇರವೆರಿಸಿ ಅವರು  ಮಾತನಾಡಿದರು. ಆಸ್ಪತ್ರೆ ಬಳಿಯ ಕೆರೆಯನ್ನು ಅಭಿವೃದ್ದಿ ಪಡಿಸಲು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಬಿಬಿಎಂಪಿ ಸದಸ್ಯೆ ವೀಣಾ ನಾಗರಾಜು ಮಾತನಾಡಿ, ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಗೆ ಸಂಪೂರ್ಣ ಗ್ರಾಮೀಣ ಪ್ರದೇಶಗಳು ಸೇರ್ಪಡೆಯಾಗಿದ್ದು ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ, ಡಾಂಬರೀಕರಣ, ಕುಡಿಯುವ ನೀರು, ನೈರ್ಮಲ್ಯ ಸ್ವಚ್ಛತೆ ಮೊದಲಾದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ’ ಎಂದರು.

ಪಾಲಿಕೆ ಕಾಮಗಾರಿ ಸ್ಥಾಯಿಸಮಿತಿ ಅಧ್ಯಕ್ಷ ಎಚ್.ರವೀಂದ್ರ, ಸದಸ್ಯ ಜಿ.ಎಚ್.ರಾಮಚಂದ್ರ, ಜಿ.ಪಂ.ಸದಸ್ಯ ಎ.ಶಿವಕುಮಾರ್, ಕಂಠೀರವ ಸ್ಟುಡಿಯೋ ಅಧ್ಯಕ್ಷ ಎಂ.ರುದ್ರೇಶ್, ಮಾಜಿ ಸದಸ್ಯ ಜಿ.ವಿಜಯಕುಮಾರ್, ತಾ.ಪಂ. ಮಾಜಿ ಅಧ್ಯಕ್ಷ ಎಚ್.ನಾಗರಾಜು, ಬಿಜಿಎಸ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ವೆಂಕಟರಮಣ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೆಂಕಟೇಶ್ ಪ್ರಭು ಇತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.