ಬುಧವಾರ, ನವೆಂಬರ್ 20, 2019
20 °C

`ಅಭಿವೃದ್ಧಿ ಕಾರ್ಯಗಳೇ ಗೆಲುವಿಗೆ ಶ್ರೀರಕ್ಷೆ'

Published:
Updated:

ಕಮಲನಗರ: ಕಳೆದ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ ಔರಾದ್ ತಾಲ್ಲೂಕಿನಲ್ಲಿ ಜಾರಿಗೆ ಬಂದ ಅನೇಕ ಜನಪರ, ಕಲ್ಯಾಣ ಕಾರ್ಯಕ್ರಮಗಳೇ ಬಿಜೆಪಿ ಗೆಲುವಿಗೆ ಶ್ರೀರಕ್ಷೆಯಾಗಿದೆ ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದರು.ಕಮಲನಗರದಲ್ಲಿ ಗುರುವಾರ ನಡೆದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ತಮ್ಮ ಅವಧಿಯಲ್ಲಿ ಕಮಲನಗರದಲ್ಲಿ ಸುಮಾರು 40 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅನೇಕ ಯೋಜನೆಗಳ ಮೂಲಕ ಜನಸಾಮಾನ್ಯರ ಏಳಿಗೆಗಾಗಿ ಶ್ರಮಿಸಿದ್ದೇನೆ ಎಂದರು.ಕಳೆದ ಅವಧಿಯಲ್ಲಿ ತಾಲ್ಲೂಕಿನ ಅಭಿವೃದ್ಧಿಗಾಗಿ ಜಾರಿಗೆ ತರಲಾದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಬಸವರಾಜ ಪಾಟೀಲ ಮಾತನಾಡಿ, ಸ್ವಾತಂತ್ರ್ಯ ನಂತರ ಔರಾದ್ ತಾಲ್ಲೂಕಿನಲ್ಲಿ ಶಾಸಕ ಪ್ರಭು ಚವ್ಹಾಣ್ ಅವರ ಅಧಿಕಾರ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚವ್ಹಾಣ್ ಅವರ ಗೆಲುವಿಗೆ ಎಲ್ಲ ಕಾರ್ಯಕರ್ತರು ಶ್ರಮಿಸಬೇಕು ಎಂದರು.

ಬಿಜೆಪಿ ತಾಲ್ಲೂಕು ಅಧ್ಯಕ್ಷ ಸುರೇಶ ಭೋಸ್ಲೆ ಮಾತನಾಡಿ, ತಾಲ್ಲೂಕಿನಲ್ಲಿ ನಡೆದ ಅನೇಕ ಅಭಿವೃದ್ಧಿ ಕಾರ್ಯಗಳಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ನೀಲಕಂಠರಾವ್ ಕಾಂಬಳೆ ಮಾತನಾಡಿದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಕುಮಾರ ಪಾಟೀಲ, ಸದಸ್ಯ ಶ್ರೀರಂಗ್ ಪರಿಹಾರ್, ಮುಖಂಡ ಶಿವಾನಂದ ವಡ್ಡೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಕುಮಾರ ಝುಲ್ಪೆ, ಉಪಾಧ್ಯಕ್ಷ ಬಾಲಾಜಿ ತೇಲಂಗ್, ರಾಜಹಂಸ್ ಶೆಟಕಾರ್, ವೀರೇಂದ್ರ ರಾಜಾಪುರೆ, ರವಿ ಮದನೂರ್, ಔರಾಂಗ್‌ಸಾಬ್, ಸಂಜೀವಕುಮಾರ ಮಹಾಜನ್, ಸುಭಾಷ ಮಿರ್ಚೆ, ಚಂದ್ರಶೇಖರ ದೇಶಮುಖ್, ಅಮೃತರಾವ್ ವಟಗೆ ಇದ್ದರು.

ಪ್ರತಿಕ್ರಿಯಿಸಿ (+)