ಶುಕ್ರವಾರ, ಏಪ್ರಿಲ್ 16, 2021
22 °C

ಅಭಿವೃದ್ಧಿ ಕುಂಠಿತವಾದರೆ ಸೂಪರ್‌ಸೀಡ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು. ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ವಿಫಲವಾದರೆ ಇಲ್ಲಿನ ನಗರಸಭೆಯನ್ನು ಸೂಪರ್‌ಸೀಡ್ ಮಾಡಲು ಹಿಂಜರಿಯುವುದಿಲ್ಲ ಎಂದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಎಚ್ಚರಿಕೆ ನೀಡಿದರು.ಮಂಗಳವಾರ ನಗರಸಭೆ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಚಿವರು, ಕುಡಿಯುವ ನೀರಿಗೂ ರಾಜಕೀಯ ಬೇಡ. ಕಲುಷಿತ ನೀರು ಕುಡಿದು ಯಾರಾದರೂ ಮೃತಪಟ್ಟರೆ ಸರ್ಕಾರ ಉತ್ತರ ನೀಡಬೇಕಾಗುತ್ತದೆ ಹೊರತು ಇಲ್ಲಿನ ಶಾಸಕರಲ್ಲ. ನೀರು ಕಲುಷಿತವಾಗಿದೆ ಎಂದು ನಗರಸಭೆ ಅಧ್ಯಕ್ಷರೇ ಹೇಳುತ್ತಿದ್ದಾರೆ. ಟ್ಯಾಂಕ್‌ಗಳನ್ನು ತಕ್ಷಣವೇ ಸ್ವಚ್ಛ ಗೊಳಿಸಲು ಕ್ರಮ ಕೈಗೊಳ್ಳಬೇಕು. ಶುದ್ಧಿಕರಣಕ್ಕೆ ಹೆಚ್ಚಿನ ಗಮನ ನೀಡಬೇಕು. ಈ ವಿಚಾರದಲ್ಲಿ ಸದಸ್ಯರೂ ಸೇರಿದಂತೆ ಯಾರೇ ಆಗಲಿ ನಿರ್ಲಕ್ಷ್ಯ ಅಥವಾ ಅಡ್ಡಿಪಡಿಸಿದರೆ ಮುನ್ಸಿಪಲ್ ಕಾಯ್ದೆ ಅನ್ವಯ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಳಗಾವಿ ಮಾದರಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.ಒಳಚರಂಡಿ, ರಸ್ತೆ ಹಾಗೂ ಮೂಲ ಸೌಕರ್ಯ ಸೇರಿದಂತೆ ನಗರದ ಅಭಿವೃದ್ಧಿಗೆ ಕೆಲ ಸದಸ್ಯರು ಅಡ್ಡಿ ಪಡಿಸುತ್ತಿದ್ದಾರೆ ಎನ್ನುವುದು ತಮ್ಮ ಗಮನಕ್ಕೆ ಬಂದಿದೆ. ಯಾವುದೇ ಪಕ್ಷದ ಜನಪ್ರತಿನಿಧಿಗಳು ನಾಗರಿಕರಿಗೆ ಅನುಕೂಲ ಮಾಡಿಕೊಡಬೇಕು. ಒಂದು ವೇಳೆ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಅಭಿವೃದ್ಧಿ ಕಾರ್ಯಗಳಿಗೆ ಉಪಯೋಗಿಸಬೇಕು ಎಂದು ತಾಕೀತು ಮಾಡಿದರು.ನಗರಸಭೆ ಇರುವುದು ನಗರದ ಸಾರ್ವಜನಿಕರಿಗೆ ಸೌಲಭ್ಯ ಒದಗಿಸುವುದಕ್ಕೆ ಹೊರತು ಇಲ್ಲಿರುವ ಸದಸ್ಯರು, ಅಧಿಕಾರಿಗಳ ಸ್ವಾರ್ಥಕ್ಕಾಗಿ ಅಲ್ಲ. ಈಗಾಗಲೇ ಅಭಿವೃದ್ಧಿಯಾಗಿರುವ ವಾರ್ಡ್‌ಗಳನ್ನು ಹೊರತುಪಡಿಸಿ ಉಳಿದ ವಾರ್ಡ್‌ಗಳಲ್ಲಿ ಅಭಿವೃದ್ಧಿಯಾಗಲು ಸಹಕರಿಸಿ ಎಂದು ಕಿವಿಮಾತು ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.