ಅಭಿವೃದ್ಧಿ ನಿಧಿ ಸ್ಥಾಪನೆಗೆ ಸಿಂಧ್ಯ ಒತ್ತಾಯ

ಬುಧವಾರ, ಜೂಲೈ 17, 2019
29 °C

ಅಭಿವೃದ್ಧಿ ನಿಧಿ ಸ್ಥಾಪನೆಗೆ ಸಿಂಧ್ಯ ಒತ್ತಾಯ

Published:
Updated:

ಬೆಂಗಳೂರು: ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಮತ್ತು ಸರ್ಕಾರೇತರ ಪ್ರಾಥಮಿಕ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರತ್ಯೇಕವಾಗಿ `ಮುಖ್ಯಮಂತ್ರಿಯವರ ಗ್ರಾಮೀಣ ಶಾಲೆಗಳ ಅಭಿವೃದ್ಧಿ ನಿಧಿ~ ಯನ್ನು ಸ್ಥಾಪಿಸಿ, ಇದಕ್ಕೆ ಸರ್ಕಾರ ಪ್ರತಿ ವರ್ಷ ಬಜೆಟ್‌ನಲ್ಲಿ ಹಣ ಒದಗಿಸಬೇಕು ಎಂದು ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ ಒತ್ತಾಯಿಸಿದ್ದಾರೆ.ಕೈಗಾರಿಕೋದ್ಯಮಿಗಳಿಂದ, ವಿವಿಧ ಸಂಸ್ಥೆಗಳಿಂದ ಹಾಗೂ ದಾನಿಗಳಿಂದ ದೇಣಿಗೆ ಪಡೆದುಕೊಳ್ಳಬೇಕು. ಈ ನಿಧಿಗೆ ಆದಾಯ ತೆರಿಗೆ ವಿನಾಯಿತಿ ಪಡೆದು, ಆ ಹಣವನ್ನು ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ ಉಪಯೋಗಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿರುವ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ, ಉಪಾಧ್ಯಾಯರು ಇಲ್ಲದಿರುವುದು, ವಿದ್ಯಾರ್ಥಿಗಳಿಗೆ ಆಟದ ಮೈದಾನ ಇಲ್ಲದಿರುವುದು ಕಂಡುಬಂದಿದೆ. ಇವುಗಳ ನಿರ್ವಹಣೆಗಾಗಿ ಈ ಹಣವನ್ನು ವಿನಿಯೋಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry