ಶುಕ್ರವಾರ, ನವೆಂಬರ್ 15, 2019
21 °C
ಅಂಬಣ್ಣ, ರಮೇಶಗೆ ಮಾದೇಗೌಡ ಪ್ರಶಸ್ತಿ ಪ್ರದಾನ

ಅಭಿವೃದ್ಧಿ ಪೂರಕವಾಗಿ ಸಂಶೋಧನೆ ಆಗತ್ಯ

Published:
Updated:

ಮಂಡ್ಯ:  `ಅಭಿವೃದ್ಧಿಗೆ ಪೂರಕವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಇತರ ಎಲ್ಲ ಕ್ಷೇತ್ರಗಳಲ್ಲೂ ಹೆಚ್ಚಿನ ಸಂಶೋಧನೆ ಆಗಬೇಕಿದೆ' ಎಂದು ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು.ಮಾಜಿ ಸಂಸದ ಡಾ.ಜಿ. ಮಾದೇಗೌಡ ಪ್ರತಿಷ್ಠಾನವು ನಗರದ ರೈತ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಾದೇಗೌಡರ ಹೆಸರಿನಲ್ಲಿ ನೀಡುವ ರಾಜ್ಯಮಟ್ಟದ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.ಜಾಗತಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಹೆಚ್ಚಿನ ಸಂಶೋಧನೆ ಅಗತ್ಯವಿದೆ ಎಂದು ಪ್ರತಿಪಾದಿಸಿದ ಅವರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಇದು ಅನಿವಾರ್ಯ ಎಂದು ಅಭಿಪ್ರಾಯಪಟ್ಟರು.ಪ್ರಶಸ್ತಿ ಪುರಸ್ಕೃತ ಡಾ.ಬಿ. ಅಂಬಣ್ಣ ಮಾತನಾಡಿ, `ಕಾಯಕವೇ ಕೈಲಾಸ' ಎನ್ನುವ ಬಸವಣ್ಣ ಅವರ ಮಾತಿನಲ್ಲಿ ನಂಬಿಕೆಯಿಟ್ಟು ಜನಸೇವೆ ಮಾಡುತ್ತಾ ಬಂದಿದ್ದೇನೆ. ಪ್ರಶಸ್ತಿ ಸಿಕ್ಕಿರುವುದು ಖುಷಿ ತಂದಿದೆ ಎಂದರು.ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಜಿ. ಕೃಷ್ಣನ್ ಅವರು, ಡಾ.ಜಿ. ಮಾದೇಗೌಡ ಸಮಾಜ ಸೇವಾ ಮತ್ತು ಸಾವಯವ ಕೃಷಿಕ ಪ್ರಶಸ್ತಿಯನ್ನು ಕ್ರಮವಾಗಿ ಬಳ್ಳಾರಿ ಜಿಲ್ಲೆಯ ಡಾ.ಬಿ. ಅಂಬಣ್ಣ ಮತ್ತು ಬೆಂಗಳೂರು ಜಿಲ್ಲೆ ದೇವನಹಳ್ಳಿ ಪ್ರಗತಿಪರ ರೈತ ಶಿವನಾಪುರ ರಮೇಶ್ ಅವರಿಗೆ ಪ್ರದಾನ ಮಾಡಿದರು. ಪ್ರಶಸ್ತಿ ಪುರಸ್ಕೃತರಿಗೆ ತಲಾ 10 ಸಾವಿರ ರೂ. ನಗದು, ಫಲಕ ಮತ್ತು ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು.ಮಾಜಿ ಸಂಸದ ಜಿ. ಮಾದೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್‌ಮಾಜಿ ಶಾಸಕ ಮಧು  ಜಿ. ಮಾದೇಗೌಡ, ಪ್ರತಿಷ್ಠಾನ ಅಧ್ಯಕ್ಷ ಬಿ. ಬಸವರಾಜು, ನಂಜೇಗೌಡ, ಸಿದ್ದೇಗೌಡ ಇದ್ದರು.

ಪ್ರತಿಕ್ರಿಯಿಸಿ (+)