ಶನಿವಾರ, ಮೇ 15, 2021
24 °C

ಅಭಿವೃದ್ಧಿ ಯೋಜನೆಗೆ ಆದ್ಯತೆ: ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ: ಬರಲಿರುವ ಎರಡು ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರ  ಅಭಿವೃದ್ಧಿಯ ಪರವಾಗಿ ಕೆಲಸ ಮಾಡಲಿದ್ದು, ಯೋಜನೆಗಳನ್ನು ಜನರಿಗೆ ತಲುಪಿಸುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ನುಡಿದರು.ಶನಿವಾರ ಪಟ್ಟಣದ ರಾಘವೇಂದ್ರಮಠದ ಸಭಾಭವನದಲ್ಲಿ ನಡೆದ ಬಿಜೆಪಿಯ ಜಿಲ್ಲಾ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.`ಇವುಗಳು ರಾಜಕೀಯವಾಗಿ  ಕಠಿಣ ದಿನಗಳಾಗಿವೆ. ಆದರೆ ಪಕ್ಷದ ರಾಷ್ಟ್ರ ಮತ್ತು ರಾಜ್ಯ ನಾಯಕರು ಈ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲಿದ್ದಾರೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕಳೆದ 3 ವರ್ಷಗಳಲ್ಲಿ ಉತ್ತಮ ಕೆಲಸವನ್ನು ರಾಜ್ಯ ಸರ್ಕಾರ ಮಾಡಿತ್ತು. ಈಗ ಸದಾನಂದ ಗೌಡರ ನೇತೃತ್ವದಲ್ಲಿ ಆ ಅಭಿವೃದ್ಧಿಯನ್ನೇ ಮುಂದುವರಿಸಿಕೊಂಡು ಹೋಗುತ್ತೇವೆ~ ಎಂದರು.ಕೇಂದ್ರ ಸರ್ಕಾರ ಭಯೋತ್ಪಾದನೆಯನ್ನು ಹತ್ತಿಕ್ಕುವ ರಾಜಕೀಯ ಇಚ್ಛಾಶಕ್ತಿಯನ್ನು ತೋರುತ್ತಿಲ್ಲ. ಈ ಕಾರಣದಿಂದ ಭಯೋತ್ಪಾದನೆ ಹೆಚ್ಚಾಗಿದೆ ಎಂದರು.`ಪಕ್ಷದ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ಯಾತ್ರೆಯನ್ನು ಪ್ರಾರಂಭಿಸಲಿದ್ದು, ಅದನ್ನು ಸಮರ್ಥವಾಗಿ ನಾವು ಮುನ್ನೆಡೆಸಬೇಕಾಗಿದೆ ಎಂದರು.ಶಾಸಕ ವಿ,ಎಸ್.ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ಹಿಂದುಳಿದವರಿಗೆ ಬಡವರಿಗೆ ಸಾಕಷ್ಟು ಯೋಜನೆಗಳನ್ನು ಜಾರಿ ಮಾಡಿದೆ ಎಂದರು.ಕೆಎಸ್‌ಡಿಎಲ್ ಅಧ್ಯಕ್ಷ ಶಿವಾನಂದ ನಾಯ್ಕ ಮಾತನಾಡಿ, ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡಿತು. ಆದ್ದರಿಂದ ಆ ಸಂದರ್ಭದಲ್ಲಿ ನಡೆದ ಚುನಾವಣೆಗಳಲ್ಲಿ ವಿರೋಧ ಪ್ರಕ್ಷಗಳು ಧೂಳಿಪಟವಾದವು ಎಂದರು.ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಪ್ರಸಾದ ಕಾರವಾರಕರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ವಿನೋದ ಪ್ರಭು, ಪಕ್ಷದ ಪ್ರಮುಖ ಪದಾಧಿಕಾರಿಗಳಾದ ಎಂ.ಜಿ.ಭಟ್ಟ,ಎಂ.ಜಿ.ನಾಯ್ಕ,ಎಸ್.ಎಂ.ಭಟ್ಟ,ಕೆ.ಜಿ.ನಾಯ್ಕ ಸಂಧ್ಯಾ ಕುರ್ಡೆಕರ್ ಮೊದಲಾದವರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.