ಸೋಮವಾರ, ಮೇ 23, 2022
30 °C

ಅಭಿವೃದ್ಧಿ ಸತ್ಯಾಂಶ ಬಹಿರಂಗಪಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಶಿವಮೊಗ್ಗ: ಸರ್ಕಾರ ಸಾಧನಾ ಸಮಾವೇಶದಲ್ಲಿ ಈವರೆಗೆ ಮಾಡಿದ ಅಭಿವೃದ್ಧಿ ಕಾರ್ಯಗಳ ಸತ್ಯಾಂಶದ ವರದಿಯನ್ನು ಬಹಿರಂಗಪಡಿಸಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದರು.ಶಿಕಾರಿಪುರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾವಿರ ದಿನಗಳನ್ನು ಪೂರೈಸಿದ್ದನ್ನೇ ಸಾಧನೆಯಾಗಿ ಬಿಂಬಿಸುತ್ತಿರುವ ಸರ್ಕಾರ, ರಾಜ್ಯಕ್ಕೆ ನೀಡಿದ ಕೊಡುಗೆ ಏನೆಂಬುದನ್ನು ಜನತೆ ಮುಂದಿಡಬೇಕು ಎಂದು ಒತ್ತಾಯಿಸಿದರು.

ಶನಿಯಾಗಿ ಹೆಗಲೇರುವೆ

‘ಮೈಸೂರಿನ ಸಂಸದ ಸ್ಥಾನ ನಾನು ಕೊಟ್ಟ ಭಿಕ್ಷೆ; ನಾನು ಬಿಟ್ಟು ಕೊಡದಿದ್ದರೆ ಮನೆಯಲ್ಲಿ ಇರುತ್ತಿದ್ದರು. ಆದರೆ, ಆ ವ್ಯಕ್ತಿ ಇಂದು ಬಾಡಿಗೆ ಬಂಟರನ್ನು ಇಟ್ಟುಕೊಂಡು ಬೇಕಾಬಿಟ್ಟಿ ಮಾತನಾಡುತ್ತಿದ್ದಾರೆ. ಶನಿ ಎಂದು ಸಂಬೋಧಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಶನಿರೂಪದಲ್ಲೇ ಅವರ ಹೆಗಲೇರಲಿದ್ದೇನೆ’ಎಂದು ಎಚ್. ವಿಶ್ವನಾಥ್ ಅವರ ಹೆಸರು ಹೇಳದೆ ಹರಿಹಾಯ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.