ಶುಕ್ರವಾರ, ಮೇ 14, 2021
35 °C

ಅಭಿವೃದ್ಧಿ ಹೆಸರಲ್ಲಿ ರಾಜಕೀಯ ಬೇಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಭಿವೃದ್ಧಿ ಹೆಸರಲ್ಲಿ ರಾಜಕೀಯ ಬೇಡ

ಅರಸೀಕೆರೆ: ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಾಗಲಿ ಅಥವಾ ಜಾತೀಯತೆ ಮಾಡುತ್ತ ಪ್ರಗತಿಗೆ ಮಾರಕವಾಗಿದ್ದೇನೆ ಎಂಬುದನ್ನು ಸಾಬೀತು ಪಡಿಸಿದರೆ ಶಾಸಕ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ನೀಡುತ್ತೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಸವಾಲೆಸೆದರು.ತಾಲ್ಲೂಕಿನ ಕೆ.ಶಂಕರನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಡಲಮಗೆ ಗ್ರಾಮದಲ್ಲಿ ರೂ. 6 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಸಮುದಾಯ ಭವನವನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.ಶಾಸಕನಾಗಿ ಆಯ್ಕೆಯಾದ ಬಳಿಕ ಜಾತ್ಯತೀತವಾಗಿ ಯಾವ ಸಮುದಾಯಕ್ಕೂ ತೊಂದರೆಯಾಗದಂತೆ ನಡೆದುಕೊಂಡು ಬಂದಿದ್ದರೂ, ಪದೇ ಪದೇ ತಮ್ಮ ವಿರುದ್ಧ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಚುನಾವಣೆ ಬಂದಾಗ ರಾಜಕೀಯ ಮಾಡಲಿ. ಆದರೆ, ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಬೆರಸದೆ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಹೋದರೆ ತಾಲ್ಲೂಕನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದು ಎಂದು ಹೇಳಿದರು.ಶಂಕರನಹಳ್ಳಿ ಗ್ರಾ.ಪಂ. ಅಧ್ಯಕ್ಷ ಎಸ್.ಆರ್.ಮರುಳಪ್ಪ ಉದ್ಘಾಟಿಸಿದರು. ತಾ.ಪಂ. ಉಪಾಧ್ಯಕ್ಷ ಹಾರನಹಳ್ಳಿ ಶಿವಮೂರ್ತಿ, ಅರಸೀಕೆರೆ ಪುರಸಭಾ ಮಾಜಿ ಅಧ್ಯಕ್ಷ ಎನ್.ಎಸ್.ಸಿದ್ದರಾಮಶೆಟ್ಟಿ, ಇಓ ಚಂದ್ರಶೇಖರ್ ಮಾತನಾಡಿದರು.ಜಿ.ಪಂ. ಸದಸ್ಯೆ ಪಾರ್ವತಮ್ಮ, ಮಾಜಿ ಸದಸ್ಯ ಕೆ.ಪಿ.ಶಿವಮೂರ್ತಿ, ಗ್ರಾ.ಪಂ. ಸದಸ್ಯರಾದ ಚನ್ನಬಸಪ್ಪ, ಗಂಗಾಧರಪ್ಪ, ಭಾಗ್ಯಮ್ಮ, ಮಹೇಶ್, ಮೈಲಾರಪ್ಪ, ಡಿ.ಎಂಕುರ್ಕೆ ಗ್ರಾ.ಪಂ. ಅಧ್ಯಕ್ಷ ದಯಾನಂದ, ಮುಖಂಡರಾದ ನಂಜುಂಡಶೆಟ್ಟಿ, ಬಸವರಾಜು, ಉಪ ತಹಶೀಲ್ದಾರ್ ಮೋಹನ್‌ಬೆಣ್ಣಿ ಉಪಸ್ಥಿತರಿದ್ದರು.

ತಾ.ಪಂ. ಅಧ್ಯಕ್ಷ ಕೆ.ಎಂ. ನಂಜುಂಡಪ್ಪ ಸ್ವಾಗತಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.