ಅಭ್ಯರ್ಥಿಗಳಿಗೆ ನೋಟಿಸ್

ಮಂಗಳವಾರ, ಮೇ 21, 2019
31 °C

ಅಭ್ಯರ್ಥಿಗಳಿಗೆ ನೋಟಿಸ್

Published:
Updated:

ಕೊಪ್ಪಳ: ಕಳೆದ ಸೆ. 20ರಂದು ನಡೆದ ಎರಡನೇ ಹಂತದ ಪರಿಶೀಲನೆ ಸಂದರ್ಭದಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ಚುನಾವಣಾ ವೆಚ್ಚ ವಿವರಗಳಲ್ಲಿ ಸಾಕಷ್ಟು ನ್ಯೂನತೆಗಳು ಕಂಡು ಬಂದಿವೆ. ಹೀಗಾಗಿ ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.ಬಿಜೆಪಿಯ ಸಂಗಣ್ಣ ಕರಡಿ, ಜೆಡಿಎಸ್‌ನ ಪ್ರದೀಪಗೌಡ ಮಾಲಿಪಾಟೀಲ ಹಾಗೂ ಕಾಂಗ್ರೆಸ್‌ನ ಕೆ.ಬಸವರಾಜ ಹಿಟ್ನಾಳ್ ಅವರು ಸಲ್ಲಿಸಿರುವ ಚುನಾವಣಾ ವೆಚ್ಚದ ವಿವರಗಳು ಸಮರ್ಪಕವಾಗಿಲ್ಲ. ಅಲ್ಲದೇ ಚುನಾವಣಾ ವೀಕ್ಷಕರು (ವೆಚ್ಚ) ಸಿದ್ಧಪಡಿಸಿರುವ ದಾಖಲೆಗಳಿಗೂ, ಅಭ್ಯರ್ಥಿಗಳು ಸಲ್ಲಿಸಿರುವ ವಿವರಗಳು ತಾಳೆ ಹೊಂದುತ್ತಿಲ್ಲ. ಹೀಗಾಗಿ ಈ ಬಾರಿಯೂ ಮೂವರು ಅಭ್ಯರ್ಥಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಈ ಹಿಂದೆ ಮೊದಲ ಹಂತದ ಪರಿಶೀಲನೆಗಾಗಿ ಚುನಾವಣಾ ವೆಚ್ಚದ ವಿವರಗಳನ್ನು ಸಲ್ಲಿಸಲು ವಿಫಲರಾಗಿದ್ದ ಮೂವರು ಪಕ್ಷೇತರ ಅಭ್ಯರ್ಥಿಗಳು ಈ ಬಾರಿಯೂ ವಿವರಗಳನ್ನು ಸಲ್ಲಿಸಿಲ್ಲ. ಕಣದಿಂದ ಹಿಂದಕ್ಕೆ ಸರಿದು ಜೆಡಿಎಸ್‌ಗೆ ಬೆಂಬಲ ಸೂಚಿಸಿದ್ದರೂ ವೆಚ್ಚವನ್ನು ಸಲ್ಲಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಕರಾಟೆ ಮೌನೇಶ್‌ಗೆ ಸೇರಿದಂತೆ ಈ ನಾಲ್ವರು ಪಕ್ಷೇತರರಿಗೆ ಸಹ ನೊಟೀಸ್ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry