ಭಾನುವಾರ, ಜನವರಿ 19, 2020
23 °C

ಅಭ್ಯರ್ಥಿಗಳ ಆಯ್ಕೆಗೆ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬರುವ ಲೋಕ­ಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಚರ್ಚೆಗಳೂ ಆರಂಭವಾಗಲಿವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಸೋಮ­ವಾರ ಇಲ್ಲಿ ತಿಳಿಸಿದರು.ದಕ್ಷಿಣ ಭಾರತದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿ­ಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.ಆದಷ್ಟು ಬೇಗ ಪಕ್ಷದ ಕೋರ್‌ ಕಮಿಟಿ ಸಭೆ ಸೇರಿ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಿದ್ಧ­ಪಡಿ­ಸಲಿದೆ ಎಂದು ತಿಳಿಸಿದರು.ರಾಜ್ಯ ಸರ್ಕಾರದಲ್ಲಿ ಆಂತರಿಕ ಬೇಗುದಿ ಹೆಚ್ಚಾಗಿದೆ. ಇದುವರೆ­ಗೂ ಸಚಿವರು ಮತ್ತು ಮುಖ್ಯ­ಮಂತ್ರಿ­ಗಳ ನಡುವೆ ಇದ್ದ ತಿಕ್ಕಾಟ ಈಗ ರಾಜ್ಯಪಾಲರವರೆಗೂ ವಿಸ್ತರಿಸಿದೆ. ರಾಜ್ಯಪಾಲರೇ ನೇರ­ವಾಗಿ ಸಚಿವರ ಕಾರ್ಯವೈಖರಿ ಬಗ್ಗೆ ಟೀಕೆ ಮಾಡಿದ್ದಾರೆ. ಹೀಗಾಗಿ ಈ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ಭವಿಷ್ಯ ನುಡಿದರು.

ಪ್ರತಿಕ್ರಿಯಿಸಿ (+)