ಸೋಮವಾರ, ನವೆಂಬರ್ 18, 2019
24 °C

ಅಭ್ಯರ್ಥಿಗಳ ಪಟ್ಟಿ ನಾಳೆ ಬಿಡುಗಡೆ

Published:
Updated:

ಬೆಂಗಳೂರು: `ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಅಭ್ಯರ್ಥಿಗಳ ಪಟ್ಟಿ ಹಾಗೂ ಚುನಾವಣಾ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಲಾಗುವುದು' ಎಂದು ಪಕ್ಷದ ಕರ್ನಾಟಕ ಉಸ್ತುವಾರಿ ರಾಜೀವ್ ರಾಯ್ ಗುರುವಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಕಳೆದ ಐದು ವರ್ಷಗಳ ಹಿಂದೆ ಅಭಿವೃದ್ಧಿಯಲ್ಲಿ ಮೊದಲನೇ ಸ್ಥಾನದಲ್ಲಿದ್ದ ಕರ್ನಾಟಕ, ಈಗ ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನದಲ್ಲಿದೆ. ಭ್ರಷ್ಟಾಚಾರ ಮುಕ್ತ ಕರ್ನಾಟಕ ನಮ್ಮ ಪಕ್ಷದ ಗುರಿ. ಭ್ರಷ್ಟಾಚಾರಿಗಳು ಹಾಗೂ ಕ್ರಿಮಿನಲ್ ಹಿನ್ನೆಲೆ ಉಳ್ಳವರಿಗೆ ಪಕ್ಷದ ಟಿಕೆಟ್ ಇಲ್ಲ' ಎಂದು ಸ್ಪಷ್ಟಪಡಿಸಿದರು.

ಪ್ರತಿಕ್ರಿಯಿಸಿ (+)