ಅಭ್ಯರ್ಥಿಗಳ ಹುಡುಕಾಟದಲ್ಲಿ ಮೂರು ಪಕ್ಷಗಳು

7

ಅಭ್ಯರ್ಥಿಗಳ ಹುಡುಕಾಟದಲ್ಲಿ ಮೂರು ಪಕ್ಷಗಳು

Published:
Updated:

ಬೆಂಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ತಕ್ಷಣವೇ ಆಡಳಿತಾರೂಢ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳಲ್ಲಿ ವಿದ್ಯುತ್ ಸಂಚಲನ ಉಂಟಾಗಿದೆ. ಸೂಕ್ತ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿರುವುದಲ್ಲದೆ, ಚುನಾವಣಾ ತಯಾರಿಗೂ ಪಕ್ಷಗಳು ಚಾಲನೆ ನೀಡಿವೆ.ದೆರಡು ದಿನದಲ್ಲಿ ಸೂಕ್ತ ಅಭ್ಯರ್ಥಿಯ ಹೆಸರನ್ನು ಪ್ರಕಟಿಸುವುದಾಗಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಶುಕ್ರವಾರ ತಿಳಿಸಿದರು.ಉಡುಪಿ- ಚಿಕ್ಕಮಗಳೂರು ಜಿಲ್ಲೆಗಳ ಮುಖಂಡರ ಜತೆ ಮಾತುಕತೆ ನಡೆಸಿದ್ದು, ಅವರ ಸಲಹೆ ಪ್ರಕಾರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸುನಿಲ್‌ಕುಮಾರ್ ಮತ್ತು ಬಿಜೆಪಿಯ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಅವರ ಹೆಸರುಗಳು ಪರಿಶೀಲನೆಯಲ್ಲಿ ಇವೆ. ಇವರಲ್ಲಿ ಒಬ್ಬರಿಗೆ ಟಿಕೆಟ್ ನೀಡಲಾಗುವುದು. ಈ ಕುರಿತು ಒಂದೆರಡು ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.ತಿಪಕ್ಷ ಕಾಂಗ್ರೆಸ್ ಕೂಡ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಪ್ರಯತ್ನದಲ್ಲಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಎಐಸಿಸಿಗೆ ನಾಲ್ಕು ಹೆಸರುಗಳನ್ನು ಶಿಫಾರಸು ಮಾಡಿದ್ದಾರೆ.ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದ ಗೌಡ ಅವರ ವಿರುದ್ಧ ಸೋತಿದ್ದ ಜಯಪ್ರಕಾಶ ಹೆಗ್ಡೆ, ಬಿ.ಎಲ್.ಶಂಕರ್, ಎಐಸಿಸಿ ಕಾರ್ಯದರ್ಸಿ ವಿನಯಕುಮಾರ್ ಸೊರಕೆ ಮತ್ತು ತಾರಾದೇವಿ ಸಿದ್ಧಾರ್ಥ ಅವರ ಹೆಸರುಗಳನ್ನು ಎಐಸಿಸಿಗೆ ಕಳುಹಿಸಲಾಗಿದೆ. ಇವರಲ್ಲಿ ಜಯಪ್ರಕಾಶ್ ಹೆಗ್ಡೆ ಅವರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತ ಎನ್ನಲಾಗಿದೆ.ಶೀಘ್ರ ತೀರ್ಮಾನ: ಜೆಡಿಎಸ್ ಅಭ್ಯರ್ಥಿಯನ್ನು 3-4 ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.`ಚುನಾವಣೆಯಲ್ಲಿ ಗೆಲುವು ಪಡೆಯುವ ಲೆಕ್ಕಾಚಾರ ನಡೆದಿದೆ. ಮುಂದಿನ ರಾಜಕೀಯ ತಿರುವುಗಳಿಗೆ ಈ ಚುನಾವಣೆ ದಿಕ್ಸೂಚಿ ಆಗಲಿದೆ. ಈ ಹಿನ್ನೆಲೆಯಲ್ಲಿ ನಮ್ಮದೇ ಆದ ಕಾರ್ಯತಂತ್ರ ರೂಪಿಸುತ್ತಿದ್ದೇವೆ~ ಎಂದು ಅವರು ಹೇಳಿದರು.`ಮೊದಲ ಹಂತದ ಪ್ರವಾಸ ಮುಗಿಸಿ, ನಾಯಕರು ನಗರಕ್ಕೆ ವಾಪಸಾಗಿದ್ದಾರೆ. ಶನಿವಾರದಿಂದ ಅಭ್ಯರ್ಥಿ ಆಯ್ಕೆ ಸೇರಿದಂತೆ ಚುನಾವಣಾ ಸಿದ್ಧತೆ ಪ್ರಕ್ರಿಯೆ ಆರಂಭವಾಗಲಿದೆ~ ಎಂದು ಶಾಸಕ ವೈ.ಎಸ್.ವಿ.ದತ್ತ `ಪ್ರಜಾವಾಣಿ~ಗೆ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry