ಬೇಲೂರು: `ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಸಂಸದೀಯ ಮಂಡಳಿಯ ಒಪ್ಪಿಗೆ ಪಡೆಯದೆ ಮುಂಬರುವ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರದ ಯಶವಂತಪುರ ಹಾಗೂ ಇನ್ನೂ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿರುವುದು ಸರಿಯಲ್ಲ~ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

`ಕುಮಾರಸ್ವಾಮಿ ಅಭ್ಯರ್ಥಿಗಳ ಹೆಸರು ಪ್ರಕಟ ಮಾಡಿದ್ದು, ಪಕ್ಷದ ನಿಯಮಗಳಿಗೆ ವಿರುದ್ಧವಾದುದು. ಬಸವರಾಜ ಹೊರಟ್ಟಿ ಜೆಡಿಎಸ್ ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷರಾಗಿದ್ದಾರೆ. ಜಿಲ್ಲಾ ಘಟಕಗಳು ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡಬೇಕು. ನಂತರ ಸಂಸದೀಯ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವುದು ನಿಯಮ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.