ಬೆಂಗಳೂರು: `ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣಾ ಕಣದಿಂದ ನಮ್ಮ ಪಕ್ಷದ ಅಭ್ಯರ್ಥಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ~ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಶುಕ್ರವಾರ ಇಲ್ಲಿ ತಿಳಿಸಿದರು.

ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಟಿ ಮಾಳವಿಕಾ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಉಪ ಚುನಾವಣೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ.
ಜೆಡಿಎಸ್ ಅಭ್ಯರ್ಥಿಯನ್ನು ಕಣದಿಂದ ಹಿಂದೆ ಸರಿಸುವಂತೆ ಕಾಂಗ್ರೆಸ್ ನಮ್ಮನ್ನು ಕೇಳಿಲ್ಲ~ ಎಂದು ಸ್ಪಷ್ಟಪಡಿಸಿದರು.

ಕ್ಷೇತ್ರದಲ್ಲಿನ ಕಾರ್ಯಕರ್ತರ ಒತ್ತಾಯದಿಂದಾಗಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದು, ಗೆಲ್ಲುವ ವಿಶ್ವಾಸವಿದೆ ಎಂದರು.

ಖಂಡನೆ: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮದವರು, ಪೊಲೀಸರ ಮೇಲೆ ವಕೀಲರು ಹಲ್ಲೆ ನಡೆಸಿರುವುದು ಖಂಡನೀಯ. ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.