ಸೋಮವಾರ, ಏಪ್ರಿಲ್ 12, 2021
26 °C

ಅಮಚವಾಡಿ: ಡೆಂಗೆ ಜ್ವರ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ಬೀದಿಯ ಮಹದೇವಮ್ಮ ಎಂಬುವರಿಗೆ ಡೆಂಗೆ ಜ್ವರ ಇರುವುದು ದೃಢಪಟ್ಟಿದೆ.ಗ್ರಾಮದಲ್ಲಿ ಮಹಿಳೆಗೆ ಡೆಂಗೆ ಜ್ವರ ಇರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ನಾಗರಿಕರು ಸ್ವಚ್ಛತೆಗೆ ಒತ್ತು ನೀಡಬೇಕು. ಚರಂಡಿಯಲ್ಲಿ ಸಂಗ್ರಹವಾಗಿರುವ ತ್ಯಾಜ್ಯವನ್ನು  ವಿಲೇವಾರಿ ಮಾಡಬೇಕು. ಗುಂಡಿಗಳು, ಟೈರ್‌ಗಳು, ತೊಟ್ಟಿಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು. ಸಂಜೆ ವೇಳೆ ಮನೆಯಲ್ಲಿ ಬೇವಿನ ಸೊಪ್ಪಿನ ಹೊಗೆ ಹಾಕಿ ಸೊಳ್ಳೆಗಳ ಹಾವಳಿ ತಡೆಗಟ್ಟಬೇಕು. ಗ್ರಾಮ ಪಂಚಾಯಿತಿ ಆಡಳಿತ ಕೂಡಲೇ ಮುಂಜಾಗ್ರತೆಯಾಗಿ ಸ್ವಚ್ಛತೆಗೆ ಕ್ರಮಕೈಗೊಳ್ಳಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸ್ಥಳೀಯ ಆಡಳಿತಕ್ಕೆ ಪತ್ರ ಬರೆದಿದ್ದಾರೆ.ಸೂಕ್ತ ಚಿಕಿತ್ಸೆಗೆ ಒತ್ತಾಯ: ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಲು ಗ್ರಾಮ ಪಂಚಾಯಿತಿ ಆಡಳಿತ ಗಮನಹರಿಸಬೇಕಿದೆ. ಹಲವು ದಿನದ ಹಿಂದೆ ಕಲುಷಿತ ನೀರು ಪೂರೈಕೆ ಪರಿಣಾಮ ಸಾವುನೋವು ಸಂಭ ವಿಸಿರುವ ನಿದರ್ಶನವಿದೆ. ಕೂಡಲೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಚಿಕಿತ್ಸೆ ನೀಡಬೇಕು. ನಿರ್ಲಕ್ಷ್ಯವಹಿಸಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮದ ಮುಖಂಡರಾದ ಡಿ. ನಾರಾಯಣಸ್ವಾಮಿ, ಕುಮಾರ್, ಬಸವರಾಜು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.