ಭಾನುವಾರ, ಏಪ್ರಿಲ್ 11, 2021
20 °C

ಅಮರನಾಥ ಯಾತ್ರಿಗಳ ಸಂಕಷ್ಟ ನಿವಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಅಮರನಾಥ ಯಾತ್ರೆಯಲ್ಲಿ ಸಂಭವಿಸುತ್ತಿರುವ ಸಾವು- ನೋವುಗಳ ಘಟನೆಗಳಿಗೆ ಪರಿಹಾರ ಸೂಚಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.`ಅಮರನಾಥ ಯಾತ್ರೆಯಲ್ಲಿ ಸಾವು- ನೋವು ಪ್ರಕರಣಗಳು ಹೆಚ್ಚಾಗಿದ್ದು, ಒಂದು ತರಹದಲ್ಲಿ ಇದು ಕಾಯಂ ಸಮಸ್ಯೆಯೇ ಆಗಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಅತ್ಯಗತ್ಯ. ಆದ್ದರಿಂದ ಜವಾಬ್ದಾರಿಯುತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ ರಚನೆ ಅವಶ್ಯಕ~ ಎಂದು ನ್ಯಾಯಮೂರ್ತಿಗಳಾದ ಬಿ.ಎಸ್. ಚೌಹಾಣ್ ಮತ್ತು ಸ್ವತಂತ್ರ ಕುಮಾರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠ ಅಭಿಪ್ರಾಯಪಟ್ಟಿದೆ.ಕೇಂದ್ರ ಹಾಗೂ ಜಮ್ಮು ಮತ್ತು ಕಾಶ್ಮೀರ ಸರ್ಕಾರಗಳ ಹಿರಿಯ ಅಧಿಕಾರಿಗಳು, ಭದ್ರತಾ ಪಡೆಯ ಅಧಿಕಾರಿಗಳು ಮತ್ತು ಅಮರನಾಥ ದೇವಾಲಯದ ಆಡಳಿತ ಮಂಡಳಿಯ ಪ್ರಮುಖರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.ಸಮಿತಿಗೆ, ಅಮರನಾಥ ದೇವಾಲಯಕ್ಕೆ ಭೇಟಿ ನೀಡಿ, ವರದಿಯನ್ನು ಅಮರನಾಥ ದೇವಾಲಯ ಮಂಡಳಿಯ ಅಧ್ಯಕ್ಷರೂ ಆದ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಿಗೆ ಸಲ್ಲಿಸುವಂತೆ ಸೂಚಿಸಿದೆ. ಈ ಮಂಡಳಿಯೇ ಪ್ರತಿ ವರ್ಷ ಅಮರನಾಥ ಯಾತ್ರೆಯನ್ನು ಸಂಘಟಿಸುತ್ತದೆ.ಈ ಸಮಿತಿ ವರದಿಯಲ್ಲಿ ನೀಡಿರುವ ಶಿಫಾರಸುಗಳನ್ನು ರಾಜ್ಯಪಾಲರು ಆಗಸ್ಟ್ 10ರೊಳಗೆ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಿದ್ದು, ಪ್ರಕರಣದ ಮುಂದಿನ ವಿಚಾರಣೆ ಆಗಸ್ಟ್ 13ಕ್ಕೆ ನಡೆಸಲಿದೆ.ಅಮರನಾಥ ಯಾತ್ರೆಯಲ್ಲಿ ಸಂಭವಿಸುತ್ತಿರುವ ಸಾವು- ನೋವುಗಳ ಬಗ್ಗೆ ಮಾಧ್ಯಮಗಳ ವರದಿಯನ್ನು ಆಧರಿಸಿ ಸುಪ್ರೀಂಕೋರ್ಟ್ ಸ್ವಯಂ ಪ್ರೇರಿತವಾಗಿ ಈ ಪ್ರಕರಣ ಕೈಗೆತ್ತಿಕೊಂಡಿದೆ. ಯಾತ್ರಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿಲ್ಲ, ಸೂಕ್ತ ವೈದ್ಯಕೀಯ ಚಿಕಿತ್ಸೆಯೂ ಲಭ್ಯವಾಗುತ್ತಿಲ್ಲ. ಆದ್ದರಿಂದ ಯಾತ್ರಿಗಳ ಸಾವು ಮತ್ತು ಗಾಯಾಳುಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.