ಸೋಮವಾರ, ಮೇ 17, 2021
25 °C

ಅಮರನಾಥ ಯಾತ್ರೆಗೆ ಉಗ್ರರ ಕರಿ ನೆರಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಧಂಪುರ (ಪಿಟಿಐ): ಈ ತಿಂಗಳ 28ರಿಂದ ಆರಂಭವಾಗಲಿರುವ ಅಮರನಾಥ ಯಾತ್ರೆ ಸಂದರ್ಭದಲ್ಲಿ ಭಯೋತ್ಪಾದಕರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ದಳ ಮಾಹಿತಿ ನೀಡಿರುವುದಾಗಿ ಸೇನೆಯ ಉತ್ತರ ವಲಯದ ಕಮಾಂಡಿಂಗ್ ಅಧಿಕಾರಿ ಲೆ. ಜ. ಕೆ. ಟಿ. ಪರ್ನಾಯಿಕ್ ತಿಳಿಸಿದ್ದಾರೆ.ಸೇನೆಯ ಉತ್ತರ ವಿಭಾಗದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತಿದ್ದ ಅವರು, ಅಮರನಾಥ ಯಾತ್ರೆಗೆ ಅಡ್ಡಿಪಡಿಸುವುದು ಭಯೋತ್ಪಾದಕರ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.ಅಮರನಾಥ ಯಾತ್ರಿಗಳ ಮೇಲೆ ಭಯೋತ್ಪಾದಕರು ನಡೆಸುವ ದಾಳಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯವಾದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಮರನಾಥ ಯಾತ್ರೆಯ ಭದ್ರತೆಗಾಗಿಯೇ `ಆಪರೇಷನ್ ಶಿವಾ' ಯೋಜನೆಯನ್ನು ರೂಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಸಭೆಯನ್ನು ನಡೆಸಲಾಗಿದೆ ಎಂದು ತಿಳಿಸಿದ್ದಾರೆ.ಅಮರನಾಥ ಯಾತ್ರೆಯ ಮಾರ್ಗದಲ್ಲಿ ಮತ್ತು ಗುಹೆಯ ಬಳಿ ಕೇಂದ್ರ ಮೀಸಲು ಪಡೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನೆಯ ಯೋಧರನ್ನು ಭದ್ರತೆಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.