ಸೋಮವಾರ, ಮೇ 17, 2021
28 °C

ಅಮರ್‌ಸಿಂಗ್‌ ಜಾಮೀನು ಅರ್ಜಿ: ಕಾಯ್ದಿರಿಸಿದ ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ವೋಟಿಗಾಗಿ ನೋಟು ಹಗರಣದಲ್ಲಿ ಆರೋಪಿಯಾಗಿ ಈಗ ನ್ಯಾಯಾಂಗ ಬಂಧನದಲ್ಲಿರುವ ಸಮಾಜವಾದಿ ಪಕ್ಷದ ಮಾಜಿ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ಅವರ ಮಧ್ಯಂತರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿದೆ.ಹಗರಣಕ್ಕೆ ಸಂಬಂಧಿಸಿದಂತೆ 55 ವರ್ಷದ ಅಮರ್ ಸಿಂಗ್ ಅವರನ್ನು ಸೆ.6ರಂದು ಬಂಧಿಸಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಅನಾರೋಗ್ಯದ ಕಾರಣ ಮುಂದಿಟ್ಟುಕೊಂಡು ಅವರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂಗೀತಾ ಧೀಂಗ್ರಾ ಸೆಹಗಲ್ ಅವರು ಹಿಂದಿನ ವಿಚಾರಣೆ ಸಂದರ್ಭದಲ್ಲಿ ಮಧ್ಯಂತರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ, ಪ್ರಕರಣವನ್ನು ಮುಂದೂಡಿದ್ದರು.ಶುಕ್ರವಾರ ಬೆಳಿಗ್ಗೆ 11 ಗಂಟೆ ವೇಳೆಗೆ ಅಮರ್ ಸಿಂಗ್ ಅವರ ಆರೋಗ್ಯ ಕುರಿತು ವರದಿ ಸಲ್ಲಿಸುವಂತೆ ತಿಹಾರ ಜೈಲಿನ ಅಧಿಕಾರಿಗಳಿಗೆ ಸೂಚಿಸಿದರು.ತಿಹಾರ್ ಜೈಲಿನ ಅಧಿಕಾರಿಗಳು ಅಮರ್‌ಸಿಂಗ್ ಆರೋಗ್ಯ ಕುರಿತು ವರದಿ ಸಲ್ಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಹಾಗೂ ಪ್ರಮುಖ ಅಂಗಾಂಗಗಳನ್ನು ನಿರಂತರವಾಗಿ ಗಮನಿಸಲಾಗುತ್ತಿದೆ ಎಂದು ತಿಳಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.