ಸೋಮವಾರ, ಜೂನ್ 14, 2021
27 °C

ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ತವ್ಯ ಲೋಪ ಹಾಗೂ ನಿರ್ಲಕ್ಷದ ಆರೋಪದ ಮೇಲೆ ಗಿರಿನಗರ ಠಾಣೆಯ ಇನ್‌ಸ್ಪೆಕ್ಟರ್ ಬಿ.ಎಸ್.ಶ್ರೀನಿವಾಸ್ ಅವರನ್ನು ಸೇವೆಯಿಂದ ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಶನಿವಾರ ಆದೇಶ ಹೊರಡಿಸಿದ್ದಾರೆ.ಮಾರ್ಚ್ 12ರಂದು ನೆಹರು ರಸ್ತೆಯಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಕಲ್ಯಾಣಮ್ಮ(65) ಎಂಬುವರ ಚಿನ್ನದ ಸರ ದೋಚಿದ್ದರು. ಈ ಸಂಬಂಧ ಕಲ್ಯಾಣಮ್ಮ, ಗಿರಿನಗರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ನಾಲ್ಕು ದಿನಗಳಾದರೂ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಕಲ್ಯಾಣಮ್ಮ ಸಂಬಂಧಿಕರು ಕಮಿಷನರ್ ಬಳಿ ದೂರಿದ್ದಾರೆ.ಮಿರ್ಜಿ ಅವರ ಸೂಚನೆಯಂತೆ ದಕ್ಷಿಣ ವಿಭಾಗದ ಡಿಸಿಪಿ ಸೋನಿಯಾ ನಾರಂಗ್ ಅವರು ತನಿಖೆ ನಡೆಸಿ ಕಮಿಷನರ್‌ಗೆ ವರದಿ ಸಲ್ಲಿಸಿದರು.  `ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪದ ಆರೋಪದ ಮೇಲೆ ಶ್ರೀನಿವಾಸ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ~ ಎಂದು ಡಿಸಿಪಿ ಸೋನಿಯಾ ನಾರಂಗ್ ತಿಳಿಸಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.