ಶನಿವಾರ, ನವೆಂಬರ್ 23, 2019
18 °C

ಅಮಿತ್ ಷಾ ವಿರುದ್ಧ ಎಫ್‌ಐಆರ್ ರದ್ದು

Published:
Updated:

ನವದೆಹಲಿ (ಐಎಎನ್‌ಎಸ್): ಮುಂಬೈನಲ್ಲಿ 2006ರಲ್ಲಿ ನಡೆದ ಶೇಖ್ ಸೊಹ್ರಾಬುದ್ದೀನ್ ಸಹಚರ ತುಳಸಿರಾಂ ಪ್ರಜಾಪತಿ ನಕಲಿ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಗುಜರಾತ್ ಮಾಜಿ ಗೃಹ ಸಚಿವ ಹಾಗೂ ಹಾಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಷಾ ವಿರುದ್ಧ ಸಿಬಿಐ ಸಲ್ಲಿಸಿದ್ದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ಸುಪ್ರೀಂಕೋರ್ಟ್ ಸೋಮವಾರ ರದ್ದುಪಡಿಸಿದೆ.ಪ್ರಜಾಪತಿ ಶೂಟ್‌ಔಟ್ ಆರೋಪ   ಪಟ್ಟಿಯನ್ನು ಶೇಖ್ ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದ ಪೂರಕ ದಾಖಲೆಯಾಗಿ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಪಿ. ಸದಾಶಿವಂ ಮತ್ತು ಬಿ.ಎಸ್. ಚೌಹಾಣ್ ಅವರ ಪೀಠ ಸ್ಪಷ್ಟಪಡಿಸಿತು.`ಪ್ರಜಾಪತಿ ಮತ್ತು ಸೊಹ್ರಾಬುದ್ದೀನ್ ಇಬ್ಬರೂ ಒಂದೇ ಸಂಚಿಗೆ ಬಲಿಯಾದ ಕಾರಣ ಎರಡೂ ಪ್ರಕರಣಗಳನ್ನು ಪ್ರತ್ಯೇಕವಾಗಿ ಪರಿಗಣಿಸುವುದು ಸಾಧ್ಯವಿಲ್ಲ. ಹೀಗಾಗಿ ಎರಡೂ ಪ್ರಕರಣಗಳನ್ನು ಒಟ್ಟಾಗಿಯೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕಿರುವುದರಿಂದ ಪ್ರತ್ಯೇಕ ವಿಚಾರಣೆ ನಡೆಸುವ ಅಗತ್ಯವಿಲ್ಲ' ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.  ಸೊಹ್ರಾಬುದ್ದೀನ್ ಎನ್‌ಕೌಂಟರ್ ನಲ್ಲಿ ಜೈಲುಶಿಕ್ಷೆ ಅನುಭವಿಸಿದ ಷಾ ಜಾಮೀನು ಪಡೆದು ಹೊರಬಂದಿದ್ದಾರೆ. ಪ್ರಜಾಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐಯು, ನ್ಯಾಯಾಲಯಕ್ಕೆ ಪ್ರತ್ಯೇಕ ಆರೋಪಪಟ್ಟಿ ಸಲ್ಲಿಸಿದ್ದರಿಂದ ಷಾ ಮತ್ತೆ ಸಿಬಿಐನಿಂದ ಬಂಧನಕ್ಕೆ ಒಳಗಾಗುವ ಭೀತಿ ಎದುರಿಸುತ್ತಿದ್ದರು.

ಪ್ರತಿಕ್ರಿಯಿಸಿ (+)