ಭಾನುವಾರ, ಮೇ 22, 2022
22 °C

ಅಮೆರಿಕದಲ್ಲಿ ದಲೈ ಲಾಮ ಸೋದರನ ಪುತ್ರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹ್ಯೂಸ್ಟನ್ (ಪಿಟಿಐ): ಟಿಬೆಟನ್ ಧಾರ್ಮಿಕ ಗುರು ದಲೈ ಲಾಮ ಅವರ ಹಿರಿಯ ಸೋದರನ ಪುತ್ರ ಜಿಗ್ಮೆ ನೊರ್ಬೂ (45) ಅಮೆರಿಕದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಟಿಬೆಟನ್ನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಶ್ವಕ್ಕೆ ಮನದಟ್ಟು ಮಾಡಿಕೊಡುವ ಉದ್ದೇಶದಿಂದ ಫ್ಲೋರಿಡಾದಲ್ಲಿ ಸೋಮವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಕಾಲ್ನಡಿಗೆ ವೇಳೆ ಹೆದ್ದಾರಿಯಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಜಿಗ್ಮೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.ಜಗತ್ತಿನ ಗಮನ ಸೆಳೆಯಲು ಟಿಬೆಟಿನ ಈ ಹೋರಾಟಗಾರ ಕಳೆದ ಹಲವು ವರ್ಷಗಳಿಂದ ವಿಶ್ವದಾದ್ಯಂತ ಅನೇಕ ಸಲ ನಡಿಗೆ ಕೈಗೊಂಡಿದ್ದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.