ಬುಧವಾರ, ಜುಲೈ 28, 2021
21 °C

ಅಮೆರಿಕ ರಾಯಭಾರ ಕಚೇರಿಗೆ ಭದ್ರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್ (ಪಿಟಿಐ): ಲಾಡೆನ್ ಹತ್ಯೆಯ ಹಿನ್ನೆಲೆಯಲ್ಲಿ ಪಾಕ್ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖ ರಾಜತಾಂತ್ರಿಕ ಪ್ರದೇಶಗಳಲ್ಲಿ, ಅದರಲ್ಲಿಯೂ ಅಮೆರಿಕ ರಾಯಭಾರ ಕಚೇರಿ, ಪೆಶಾವರ, ಲಾಹೋರ್ ಮತ್ತು ಕರಾಚಿಗಳಲ್ಲಿನ ದೂತಾವಾಸಗಳ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.ಪಾಕ್ ಆಂತರಿಕ ಸಚಿವ ರೆಹಮಾನ್ ಮಲಿಕ್ ಹಿರಿಯ ಪೊಲೀಸ್, ಭದ್ರತೆ ಮತ್ತು ಗುಪ್ತಚರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಲ್ಲಾ ಪ್ರಮುಖ ಪ್ರದೇಶ ಮತ್ತು ಕಟ್ಟಡಗಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಸೂಚಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.