ಮಂಗಳವಾರ, ಮೇ 17, 2022
23 °C

ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಅರಣ್ಯದಲ್ಲಿ ಜಾನುವಾರು ಮೇಯಿಸಲು ಬಿಡುವುದಿಲ್ಲ ಮತ್ತು ಅನಗತ್ಯವಾಗಿ ರೈತರುಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಬರಗಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಮಂಗಳವಾರ ಬರಗಿ ಫಾರಂ ಬಳಿ ಪ್ರತಿಭಟನೆ ನಡೆಸಿದರು.ಅರಣ್ಯ ಇಲಾಖೆಯ ಆನಂದ್ ಮಾನೆ ಎಂಬುವವರು ರೈತರುಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಮಳೆಯಾಗದೇ ಇರುವುದರಿಂದ ಜಾನುವಾರುಗಳಿಗೆ ಮೇವಿನ ಕೊರತೆ ಇದೆ. ಆದ್ದರಿಂದ ಕಾಡಂಚಿನ ಗ್ರಾಮಗಳಾದ ಬರಗಿ ಹಾಗೂ ಹೊಂಗಹಳ್ಳಿ ರೈತರುಗಳು ಸಮೀಪದ ಕಾಡಿಗೆ ಜಾನುವಾರುಗಳನ್ನು ಮೇಯಿಸಲು ಹೋಗುತ್ತಾರೆ. ಆನಂದ ಮಾನೆ ಎನ್ನುವ ಅರಣ್ಯ ಇಲಾಖೆ ಸಿಬ್ಬಂದಿ ಪಾನಮತ್ತನಾಗಿ ರೈತರುಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಲ್ಲದೆ, ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ರೈತರು ಆರೋಪಿಸಿದರು.ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಗ್ರಾಮ ಪ್ರವೇಶಿಸಲು ಬಿಡುವುದಿಲ್ಲ ಮತ್ತು ಇಲಾಖೆಯ ಮೇಲಧಿಕಾರಿಗಳು ಬರುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದರು.ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರಸ್ವಾಮಿ ಸ್ಥಳಕ್ಕೆ ಭೇಟಿ ನೀಡಿ ಸೋಲಾರ್ ಬೇಲಿ ನಿರ್ಮಾಣ ಮಾಡಿರುವುದರಿಂದ ಕಾಡಾನೆ ಹಾವಳಿ ನಿಯಂತ್ರಣದಲ್ಲಿದೆ. ಆನಂದ್ ಮಾನೆ ಬಗ್ಗೆ ಮೇಲಧಿಕಾರಿಗಳಿಗೆ ವರದಿ ನೀಡಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ಕೈಬಿಟ್ಟರು.ಬರಗಿ ಗ್ರಾಮದ ಮಹಾದೇವಪ್ಪ, ಸಿದ್ದರಾಜು, ವಿನಯ್, ಪರಶಿವಪ್ಪ, ಕಲ್ಲೇಶ್, ಸ್ವಾಮಿ, ಮಹೇಶ್ ಮುಂತಾದವರು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.