ಬುಧವಾರ, ಮೇ 25, 2022
29 °C

ಅರಣ್ಯ ಪ್ರದೇಶದಲ್ಲಿ ವಿಮಾನ ದುರಂತ: 28 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೋರ್ಟ್ ಮೊರೆಸ್ಬಿ, (ಪಪುವಾ ನ್ಯೂಗಿನಿಯಾ),(ಎಪಿ): ಪಪುವಾ ನ್ಯೂಗಿನಿಯಾದ ಅರಣ್ಯ ಪ್ರದೇಶದಲ್ಲಿ ವಿಮಾನ ದುರಂತಕ್ಕೀಡಾಗಿ 28 ಜನರು ಮೃತಪಟ್ಟಿದ್ದಾರೆ ಎಂದು ಆಸ್ಟ್ರೇಲಿಯಾದ ಅಧಿಕಾರಿಗಳು ತಿಳಿಸಿದ್ದಾರೆ.ಘಟನೆಯಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ ಪೈಲಟ್ ಸೇರಿ ನಾಲ್ವರು ಬದುಕುಳಿದಿದ್ದಾರೆ ಎಂದು ಆಸ್ಟ್ರೇಲಿಯಾದ ವಿದೇಶಾಂಗ ಮತ್ತು ವಾಣಿಜ್ಯ ಸಚಿವಾಲಯ ತಿಳಿಸಿದೆ.`ಏರ್‌ಲೈನ್ಸ್ ಪಿಎನ್‌ಜಿ ಡ್ಯಾಶ್-8~ ಎಂಬ ವಿಮಾನವು ಗುರುವಾರ `ಲಿ~ಯಿಂದ ದಕ್ಷಿಣ ಫೆಸಿಫಿಕ್ ನಡುಗಡ್ಡೆ ರಾಷ್ಟ್ರಗಳ ಮೇಲಿಂದ `ಮದಂಗ್~ ಕಡೆ ಹಾರುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಅಪಘಾತ ಪತ್ತೆ ಆಯೋಗದ ವಕ್ತಾರರು ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿದ್ದಾರೆ. ಅಂಬುಲೆನ್ಸ್‌ಗಳೂ ತೆರಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.