ಮಂಗಳವಾರ, ಮೇ 11, 2021
24 °C

ಅರಣ್ಯ ವೀಕ್ಷಕರ ಹುದ್ದೆಗೆ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಂಡ್ಲುಪೇಟೆ: ಅರಣ್ಯ ವೀಕ್ಷಕರ ಹುದ್ದೆಗೆ 225 ಅಭ್ಯರ್ಥಿಗಳು ಆಯ್ಕೆ ಯಾಗಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಹನುಮಂತಪ್ಪ ಸೋಮವಾರ ಹೇಳಿದರು.ಪಟ್ಟಣದ ದೇವರಾಜ ಅರಸ್ ಕ್ರೀಡಾಂಗಣದಲ್ಲಿ ಅರಣ್ಯ ವೀಕ್ಷಕರ ಹುದ್ದೆಗೆ ನಡೆದ ದೈಹಿಕ ಸಾಮರ್ಥ್ಯ ಪರೀಕ್ಷೆಗೆ 1,997 ಅರ್ಜಿ ಬಂದಿದ್ದು, ಇದರಲ್ಲಿ 1,500 ಅಭ್ಯರ್ಥಿಗಳು ಹಾಜರಾಗಿದ್ದರು. 225 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದರು.ಈ ಹುದ್ದೆಗೆ ರಾಜ್ಯದ ಮೈಸೂರು, ಹಾಸನ, ಶಿವಮೊಗ್ಗ, ಚಾಮರಾಜ ನಗರ, ಮಂಡ್ಯ, ಬೆಂಗಳೂರು, ತುಮಕೂರು ಹಾಗೂ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಹಾಜರಾ ಗಿದ್ದು, ಇವರಿಗೆ 1,600, 800 ಹಾಗೂ 100 ಮೀಟರ್ ಓಟದ ಸ್ಪರ್ಧೆ ಹಾಗೂ ಲಿಖಿತ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಲಾಗಿದೆ. ಅರ್ಜಿ ಸಲ್ಲಿಸಿದ್ದವರಲ್ಲಿ ಶೇಕಡ 11 ರಷ್ಟು ಅಭ್ಯರ್ಥಿಗಳು ಮಾತ್ರ ಆಯ್ಕೆಯಾ ಗಿದ್ದಾರೆ ಎಂದು ತಿಳಿಸಿದರು.ಈ ಆಯ್ಕೆಯು ಪಾರದರ್ಶ ಕತೆಯಿಂದ ಕೂಡಿದ್ದು, ಯಾವುದೇ ಗೊಂದಲಗಳಾಗಿಲ್ಲ. ನಮ್ಮ ಇಲಾಖೆಗೆ ಬೇಕಾದ ಸಿಬ್ಬಂದಿಗಳನ್ನು ಆಯ್ಕೆ ಮಾಡಿದ್ದು ಅತಿ ಶೀಘ್ರದಲ್ಲಿ ಇವರಿಗೆ ಆದೇಶ ನೀಡಲಾಗುವುದು ಎಂದು ತಿಳಿಸಿದರು.

ಈ ಅಯ್ಕೆ ಪ್ರಕ್ರಿಯೆಗೆ ಇಲಾಖೆಯ ಅನೇಕ ಸಿಬ್ಬಂದಿಗಳು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.