ಭಾನುವಾರ, ಜೂನ್ 13, 2021
26 °C

ಅರಣ್ಯ ಸಂರಕ್ಷಣೆ: ವಿದ್ಯಾರ್ಥಿಗಳಿಂದ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಆಶ್ರಯದಲ್ಲಿ ಗುರುವಾರ ಗುಮ್ಮನಕೊಲ್ಲಿ, ಮುಳ್ಳುಸೋಗೆ ಗ್ರಾಮಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಅರಣ್ಯ ಸಂರಕ್ಷಣೆ  ಕುರಿತು ಜಾಗೃತಿ ಜಾಥಾ ನಡೆಸಿದರು.ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕ, ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಏರ್ಪಡಿಸಿದ್ದ ಪರಿಸರ ಜಾಥಾದಲ್ಲಿ ವಿದ್ಯಾರ್ಥಿಗಳು ಅರಣ್ಯಗಳ ಪ್ರಾಮುಖ್ಯತೆ ಮತ್ತು ಸಂರಕ್ಷಣೆ ಕುರಿತು ನಾಗರಿಕರ ಗಮನ ಸೆಳೆದರು.ಜಾಥಾಕ್ಕೆ ಚಾಲನೆ ನೀಡಿದ ತಾಲ್ಲೂಕು ಪಂಚಾಯ್ತಿ ಸದಸ್ಯ ಬಿ.ವಿ.ಸತೀಶ್, ಪ್ರತಿಯೊಬ್ಬರೂ ಅರಣ್ಯ ಮತ್ತು ಜೀವಿ ಸಂಕುಲಗಳ ಸಂರಕ್ಷಣೆಯೊಂದಿಗೆ ಪರಿಸರ ಸಂರ ಕ್ಷಣೆಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಮುಳ್ಳುಸೋಗೆ ಗ್ರಾ.ಪಂ. ಸದಸ್ಯ ಎಸ್.ಬಿ.ಗಣಪತಿ ಮಾತನಾಡಿ, ಪ್ರತಿಯೊಬ್ಬರೂ ಪರಿಸರದಲ್ಲಿ ಹೆಚ್ಚು ಹೆಚ್ಚು ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಕಾಳಜಿ ಹೊಂದಬೇಕು ಎಂದರು.ಎನ್‌ಎಸ್‌ಎಸ್ ಅಧಿಕಾರಿ ಎಚ್.ಕೆ.ತಿಲಗಾರ್ ಅರಣ್ಯದ ಮಹತ್ವ ಕುರಿತು ತಿಳಿಸಿದರು. ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಕೆ.ಎಸ್. ಮಹೇಶ್, ಆಂದೋಲನದ ಸಂಯೋಜಕಿ ಎನ್.ಕೆ. ಮಾಲಾದೇವಿ, ಗ್ರಾ.ಪಂ. ಸದಸ್ಯ ಬಿ.ಕೆ.ಚಲುವರಾಜ್, ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಿವಾಸಮೂರ್ತಿ, ಸದಸ್ಯ ಬಾಬುಕುಮಾರ್, ಉಪನ್ಯಾಸಕ   ಎಚ್.ಬಿ.ರಂಗಮೂರ್ತಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.