ಅರಸು ಪುತ್ಥಳಿ ಜೂ.4ರಂದು ಅನಾವರಣ

7

ಅರಸು ಪುತ್ಥಳಿ ಜೂ.4ರಂದು ಅನಾವರಣ

Published:
Updated:

ಹುಣಸೂರು: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಪುತ್ಥಳಿ ಅನಾವರಣವನ್ನು ಜೂನ್ 4ರಂದು ನಡೆಸಲು ಸಭೆ ತೀರ್ಮಾನಿಸಿದೆ ಎಂದು ಶಾಸಕ ಎಚ್.ಪಿ.ಮಂಜುನಾಥ್ ಹೇಳಿದರು.ಪಟ್ಟಣ ತಾ.ಪಂ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮದ ಬಗ್ಗೆ ಚರ್ಚಿಸಿ ದಿನಾಂಕ ನಿಗದಿಗೊಳಿಸಲಾಗಿದೆ ಎಂದರು.ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಆಹ್ವಾನಿಸುವ ತೀರ್ಮಾನ ತೆಗೆದುಕೊಂಡಿದ್ದು, ಇವರೊಂದಿಗೆ ಈ ಹಿಂದೆ ಅರಸು ಹುಟ್ಟೂರು ಅಭಿವೃದ್ಧಿಗೆ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್, ಎಚ್.ಡಿ.ಕುಮಾರಸ್ವಾಮಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ರಾಮದಾಸ್ ಅವರನ್ನು ಆಹ್ವಾನಿಸಲು ಸಭೆ ತೀರ್ಮಾನಿಸಿದೆ. ಜೂನ್ 4ರಂದು ಅರಸು ಕಾರ್ಯಕ್ರಮವನ್ನು ಹಬ್ಬದ ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry