ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನ

ಸೋಮವಾರ, ಜೂಲೈ 22, 2019
27 °C

ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ದೇವರಾಜ ಅರಸು ಅವರು ಜಾರಿಗೆ ತಂದ ಯೋಜನೆಗಳ ಅನುಷ್ಠಾನದಲ್ಲಿ   ಸ್ವಯಂ ಪ್ರೇರಣೆಯಿಂದ ತೊಡಗಿಸಿಕೊಂಡು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವವರಿಗೆ 2012-13 ನೇ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.



ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿಗಳ ಕಚೇರಿ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 1 ನೇ ಮಹಡಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ಡಾ.ಅಂಬೇಡ್ಕರ್ ಬೀದಿ, ಬೆಂಗಳೂರು. ಈ ವಿಳಾಸಕ್ಕೆ ಜುಲೈ 20ರೊಳಗಾಗಿ ಸಲ್ಲಿಸಲು ಕೋರಿದೆ.



ಈ ಕುರಿತು  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 22861306 ಅನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry