ರಾಮನಗರ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸುರವರು ಬಡಜನರ ಉದ್ಧಾರಕ್ಕಾಗಿ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿ ಸಾಮಾಜಿಕ ನ್ಯಾಯ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು ಎಂದು ಶಾಸಕ ಕೆ.ರಾಜು ಬಣ್ಣಿಸಿದರು.

ನಗರದ ಗುರುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸಂಯುಕ್ತವಾಗಿ ಆಯೋಜಿಸಿದ್ದ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇವರಾಜ ಅರಸು ಅವರು ರಾಜ್ಯದಲ್ಲಿ ಒಂಬತ್ತು ವರ್ಷ ಮುಖ್ಯಮಂತ್ರಿಯಾಗಿದ್ದರು. ಶೋಷಿತ ವರ್ಗದ ಜನರ ಕಲ್ಯಾಣಕ್ಕಾಗಿ ಅಪಾರ ಕಾಳಜಿ ಹೊಂದಿದ್ದ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿದ್ದರು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಸ್.ವೆಂಕಟೇಶಪ್ಪ ಮಾತನಾಡಿ ಡಿ.ದೇವರಾಜ ಅರಸು ಅವರು ಉಳುವವನೇ ಭೂಮಿಯ ಒಡೆಯ ಎಂಬ ವಿನೂತನ ಭೂ ಸುಧಾರಣಾ ಕಾರ್ಯಕ್ರಮವನ್ನು ಜಾರಿಗೆ ತಂದರು ಎಂದು ಶ್ಲಾಘಿಸಿದರು.

ಜಿಲ್ಲಾಧಿಕಾರಿ ಎಸ್.ಪುಟ್ಟಸ್ವಾಮಿ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎಚ್.ಎಸ್.ಶಿವರಾಮು, ತಾ.ಪಂ ಸುಜಾತ ಶಿವಲಿಂಗಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.