ಮಂಗಳವಾರ, ಏಪ್ರಿಲ್ 13, 2021
31 °C

ಅರಿವಿದ್ದರೆ ಯೋಜನೆ ಯಶಸ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸೋಮವಾರಪೇಟೆ: ಯೋಜನೆ ಬಗ್ಗೆ ಸಂಪೂರ್ಣ ಅರಿವಿದ್ದರೆ ಮಾತ್ರ ಅದು ಯಶಸ್ವಿಯಾಗಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಪ್ಪಚ್ಚು ರಂಜನ್ ಹೇಳಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಘಟಕ ಹಾಗೂ ಸ್ವ ಉದ್ಯೋಗ ಮಾರ್ಗದರ್ಶನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಮಹಿಳಾ ಸ್ವ ಉದ್ಯೋಗಾಂಕ್ಷಿಗಳಿಗೆ ಕೌಶಲ್ಯಾಧಾರಿತ ಅಭಿವೃದ್ಧಿ ತರಬೇತಿ ಹಾಗೂ ಸಹಾಯಧನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಸ್ವಯಂ ಉದ್ದಿಮೆ ಆರಂಭಿಸಲು ಪ್ರಯತ್ನಿಸುವವರಿಗೆ ಸರ್ಕಾರ ಮತ್ತು ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಸಾಲ ಸೌಲಭ್ಯ ಹಾಗೂ ಅಗತ್ಯ ಮಾಹಿತಿಯೊಂದಿಗೆ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು.ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕ ಅರುಣಾಚಲ ಶರ್ಮ ಮಾತನಾಡಿ, ಉದ್ಯಮಿಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಕೂಡಿಗೆಯಲ್ಲಿ ಒಂದು ಎಕರೆ ಜಾಗವನ್ನು ಜಿಲ್ಲಾಡಳಿತ ನೀಡಿದೆ.ಇಲ್ಲಿ ತರಬೇತಿ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಂದು ಕೋಟಿ ರೂಪಾಯಿ ನೀಡಿದೆ. ಹಾಗೆಯೇ ನಮ್ಮ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂಪಾಯಿ ಹಾಕಿ ತರಬೇತಿ ಕೇಂದ್ರ ನಿರ್ಮಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಲು ಹೆಚ್ಚಿನ ಅವಕಾಶ ಇಲ್ಲದ ಕಾರಣ ಜನರು ಹೈನುಗಾರಿಕೆ ಕಡೆ ಮುಖ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಸಂಗ್ರಹಿಸುವ ಕೇಂದ್ರಗಳನ್ನು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದರು.ಉದ್ಯೋಗಾಂಕ್ಷಿಗಳಿಗೆ ಸಚಿವರು ಸಹಾಯಧನದ ಚೆಕ್‌ಗಳನ್ನು ವಿತರಿಸಿದರು. ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ರಾಣಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಡಿಕೇರಿಯ ಉಪ ನಿರ್ದೇಶಕಿ ಶಾರದಾ, ಓಡಿಪಿಯ ಜಾಯ್ಸ ಮೆಸೆಜಸ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.