ಗುರುವಾರ , ಜೂನ್ 24, 2021
27 °C

ಅರುಣ್‌ ಜೇಟ್ಲಿಗೆ ಅಮರಿಂದರ್‌ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಅಮೃತಸರ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರನ್ನು ಕಣಕ್ಕಿಳಿ­ಸಲು ಕಾಂಗ್ರೆಸ್‌  ನಿರ್ಧರಿಸಿದೆ. ಇದೇ ಕ್ಷೇತ್ರದಿಂದ ಬಿಜೆಪಿ ಈಗಾಗಲೇ  ಅರುಣ್‌ ಜೇಟ್ಲಿ ಅಭ್ಯರ್ಥಿ ಎಂದು ಘೋಷಿಸಿದೆ. ಹೀಗಾಗಿ ಈ ಕ್ಷೇತ್ರ ಪ್ರಮುಖ ನಾಯಕರಿಬ್ಬರ ಹಣಾಹಣಿಗೆ ಸಾಕ್ಷಿಯಾಗಲಿದೆ.ಅಮರಿಂದರ್‌ ಸಿಂಗ್‌ ಸ್ಪರ್ಧೆ ಕುರಿತು  ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಅಂಬಿಕಾ ಸೋನಿ ಅವರು ಶುಕ್ರವಾರ ಇಲ್ಲಿ ಅಧಿಕೃತ ಘೋಷಣೆ ಮಾಡಿದರು. ಅಮರಿಂದರ್‌ ಸಿಂಗ್‌ ಅವರಿಗೆ ಲೋಕಸಭೆಗೆ ಸ್ಪರ್ಧಿಸುವ ಇಚ್ಛೆ ಇರಲಿಲ್ಲ. ಈ ಕಾರಣಕ್ಕಾಗಿಯೇ ಅವರು, ಸ್ಥಳೀಯ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕೆಂದು ಗುರುವಾರ ಹೇಳಿದ್ದರು.ಅಂಬಿಕಾ ಸೋನಿ ಅವರು ಆನಂದ­ಪುರ ಸಾಹೀಬ್‌ ಕ್ಷೇತ್ರದಿಂದ ಅಕಾಲಿ ದಳದ ಮುಖಂಡ ಪ್ರೇಮ್‌ಸಿಂಗ್‌ ಚಂದು-­ಮಜ್ರಾ ವಿರುದ್ಧ ಸ್ಪರ್ಧಿಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.