ಪಾಂಡವಪುರ: ಸಾರ್ವಜನಿಕರು ಪದೇಪದೇ ಸರ್ಕಾರಿ ಕಚೇರಿಗಳಿಗೆ ಅಲೆಯುವಂತೆ ಮಾಡಬೇಡಿ, ಬಾಕಿ ಇರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಿ ಪರಿಹಾರ ದೊರಕಿಸಿಕೊಡಿ ಎಂದು ರಾಮನಗರ ವಿಭಾಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕ ಯು.ಪಿ.ಶಿವಾರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪ್ರವಾಸಿ ಮಂದಿರದಲ್ಲಿ ಗುರುವಾರ ಸಾರ್ವಜನಿಕರಿಂದ ದೂರು ಮತ್ತು ಅಹವಾಲು ಸ್ವೀಕರಿಸಿ ಮಾತನಾಡಿದ ಅವರು ಸಾರ್ವಜನಿಕರು ಮಾಹಿತಿ ಕೋರಿ ಅರ್ಜಿ ಸಲ್ಲಿಸಿದಾಗ ಬೇಗ ಮಾಹಿತಿ ನೀಡಿ. ಕಚೇರಿಗೆ ಬಂದ ಜನರನ್ನು ಗೌರವದಿಂದ ಕಾಣಿ ಎಂದರು.

ಪಟ್ಟಣದ ಬಿಸಿಎಂ ಹಾಸ್ಟೆಲ್ಗೆ ತಿಂಗಳಿಗೆ ರೂ.25 ಸಾವಿರ ಬಾಡಿಗೆ ನೀಡಲಾಗುತ್ತಿದೆ. ಆದರೆ ಮಕ್ಕಳು ಅಟ್ಟದ ಮೇಲೆ ಮಲಗುತ್ತಿದ್ದಾರೆ. ಮಕ್ಕಳ ಕಲಿಕೆಗೆ ಸರ್ಕಾರದಿಂದ ಕಂಪ್ಯೂಟರ್ ಬಂದಿದ್ದರೂ ಅವುಗಳನ್ನು ಬಳಸುತ್ತಿಲ್ಲ ಎಂಬ ದೂರಿನ ಬಗ್ಗೆ ಮಂಡ್ಯದ ಲೋಕಾಯುಕ್ತ ಡಿವೈಎಸ್ಪಿ ಗಿರೀಜೇಶ್ ಅವರು ಬಿಸಿಎಂ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ಬಿಸಿಎಂ ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಆಹಾರದ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು. ವಿಧವಾ ವೇತನ, ವೃದ್ಧಾಪ್ಯ ವೇತನಗಳನ್ನು ಕೂಡಲೇ ವಿತರಿಸುವಂತೆ ಹಶೀಲ್ದಾರ್ಗೆ ಸೂಚಿಸಿದರು.

ಭೂಮಿ, ನಿವೇಶನ ಸಮಸ್ಯೆ, ಉದ್ಯೋಗ ಖಾತ್ರಿಯಲ್ಲಿ ಅವ್ಯವಹಾರ, ಜಮೀನಿನ ಖಾತೆ ಸಮಸ್ಯೆ ಸೇರಿದಂತೆ ದೂರು ಮತ್ತು ಅಹವಾಲುಗಳನ್ನು ಸ್ವೀಕರಿಸಿದ ಲೋಕಾಯುಕ್ತರು ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮಂಡ್ಯ ಲೋಕಾಯುಕ್ತ ಇನ್ಸ್ಪೆಕ್ಟರ್ ಪಿ.ಕೆ.ರಾಜು, ತಹಶೀಲ್ದಾರ್ ಬಿ.ಸಿ.ಶಿವಾನಂದಮೂರ್ತಿ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.