ಸೋಮವಾರ, ಜುಲೈ 26, 2021
27 °C

ಅರ್ಜುನ ಪ್ರಶಸ್ತಿಗೆ ಜಹೀರ್ ಖಾನ್ ಹೆಸರು ಶಿಫಾರಸು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಈ ಬಾರಿಯ ಅರ್ಜುನ ಪ್ರಶಸ್ತಿಗೆ ವೇಗದ ಬೌಲರ್ ಜಹೀರ್ ಖಾನ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶಿಫಾರಸು ಮಾಡಿದೆ.ಈ ವಿಷಯವನ್ನು ಬಿಸಿಸಿಐ ಕಾರ್ಯದರ್ಶಿ ಎನ್.ಶ್ರೀನಿವಾಸನ್ ಪತ್ರಿಕಾ ಪ್ರಕಟಣೆಯಲ್ಲಿ ಮಂಗಳವಾರ ತಿಳಿಸಿದ್ದಾರೆ. ‘ಜಹೀರ್ ಅವರ ಹೆಸರನ್ನು 2011ರ ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ’ ಎಂದಿದ್ದಾರೆ.ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಜಹೀರ್ 21 ವಿಕೆಟ್ ಪಡೆದು ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ನಿಭಾಯಿಸಿದ್ದರು.ಸಲೀಮ್ ದುರಾನಿ, ಮನ್ಸೂರ್ ಅಲಿ ಖಾನ್ ಪಟೌಡಿ, ವಿಜಯ್ ಮಾಂಜ್ರೇಕರ್, ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಹರಭಜನ್ ಸಿಂಗ್ ಹಾಗೂ ಸಚಿನ್ ತೆಂಡೂಲ್ಕರ್ ಇದುವರೆಗೆ ಅರ್ಜುನ ಪ್ರಶಸ್ತಿ ಪುರಸ್ಕೃತ ಕ್ರಿಕೆಟಿಗರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.