ಅರ್ಹರಿಗೆ ಮನೆ ಹಂಚಿಕೆ: ಶಾಸಕ
ಬಂಗಾರಪೇಟೆ: ಆಶ್ರಯ ಮನೆ ಫಲಾನುಭವಿಗಳ ಆಯ್ಕೆ ಪಟ್ಟಿ ಮಾಡುವಾಗ ಖುದ್ದಾಗಿ ಪ್ರತಿ ಗ್ರಾಮಕ್ಕೂ ತೆರಳಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ವಿತರಿಸುವ ಮೂಲಕ ಪಾರದರ್ಶಕ ಆಡಳಿತ ನೀಡುವುದಾಗಿ ಶಾಸಕ ಎಂ.ನಾರಾಯಣ ಸ್ವಾಮಿ ತಿಳಿಸಿದರು.
ತಾಲ್ಲೂಕಿನ ಕ್ಯಾತಗಾನಹಳ್ಳಿಯಲ್ಲಿ ಈಚೆಗೆ ಏರ್ಪಡಿಸಿದ್ದ ಗ್ರಾಮಸಭೆಯಲ್ಲಿ ಮಾತನಾಡಿ, ಆಶ್ರಯ ಮನೆಗಳ ಹಂಚಿಕೆಯಲ್ಲಿ ಲೋಪವಾಗಿದೆ. ಅರ್ಹರನ್ನು ಕೈಬಿಟ್ಟು ಶಾಸಕರ ಬೆಂಬಲಿಗೆ ಮಾತ್ರ ಹಂಚುವ ಮೂಲಕ ಬಡವರನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡುವಾಗ ಖುದ್ದಾಗಿ ಗ್ರಾಮ ಪಂಚಾಯಿತಿ ಸದಸ್ಯರೊಂದಿಗೆ ಚರ್ಚಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸೂರಿಲ್ಲದವರು ದಲ್ಲಾಳಿಗಳನ್ನು ನಂಬದೆ ನೇರವಾಗಿ ತಮ್ಮನ್ನು ಸಂಪರ್ಕಿಸಲು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ರತ್ನಮ್ಮ ಗಣೇಶ್, ತಾ.ಪಂ.ಅಧ್ಯಕ್ಷೆ ರೇಣುಕಾ ಬಾಲಚಂದ್ರ, ಉಪಾಧ್ಯಕ್ಷ ಸಂಪಂಗಿ ರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯೆ ಸೀಮೋಲ್ ಮೋಹನ್ ಮೂರ್ತಿ, ಗ್ರಾ.ಪಂ.ಅಧ್ಯಕ್ಷೆ ಗೋವಿಂದಮ್ಮ, ಕಾರ್ಯ ನಿರ್ವಹಣಾಧಿಕಾರಿ ಸಿ.ಶ್ರೀನಿವಾಸ್, ಮುಖಂಡ ಚಕ್ರವರ್ತಿ ಮತ್ತಿತರರು ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.