ಗುರುವಾರ , ಫೆಬ್ರವರಿ 25, 2021
29 °C
ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ– ಅಧಿಕಾರಿಗಳಿಗೆ ಡಿಸಿ ವೆಂಕಟೇಶ್ ಸೂಚನೆ

ಅರ್ಹರಿಗೆ ಸರ್ಕಾರದ ಸೌಲಭ್ಯ ತಲುಪಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅರ್ಹರಿಗೆ ಸರ್ಕಾರದ ಸೌಲಭ್ಯ ತಲುಪಿಸಿ

ಉಡುಪಿ: ರೈತ ಸಂಪರ್ಕ ಕೇಂದ್ರಗಳು ಉತ್ತಮ ಸೇವೆ ನೀಡಬೇಕು. ರೈತರಿಗೆ ಸಿಗುವ ಎಲ್ಲ ರೀತಿಯ ಸಹಾಯಧನಗಳು ನೇರವಾಗಿ ಫಲಾನುಭವಿ ರೈತರ ಖಾತೆಗೆ ತಲುಪಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.ತೋಟಗಾರಿಕಾ ಇಲಾಖೆ ಯವರು ಉತ್ತಮವಾಗಿ ಕೆಲಸ ಮಾಡುವ ಮೂಲಕ ತೋಟಗಾರಿಕಾ ಬೆಳೆಯನ್ನು ಪ್ರೋತ್ಸಾಹಿಸಬೇಕು. ಯಾಂತ್ರಿಕ ಕೃಷಿಯ ಬಗ್ಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಳು ಹೆಚ್ಚಿನ ಪ್ರಚಾರ ನೀಡಬೇಕು. ಇದಕ್ಕಾಗಿ ಪ್ರಚಾರ ಮಾಧ್ಯಮಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಇಲಾಖೆಯ ಎಲ್ಲ ಸೌಲಭ್ಯಗಳು ಅರ್ಹರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.ಕಾರ್ಯಸೂಚಿಯ ಪ್ರಕಾರ ನಿಗದಿತ ಗುರಿ ಸಾಧಿಸಿ. ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯಡಿ ಬರುವ ವಸತಿ ನಿಲಯ ಗಳ ಬಗ್ಗೆ ವಾರ್ಡನ್‌ಗಳು ಹೆಚ್ಚಿನ ನಿಗಾ ವಹಿಸಬೇಕು.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಜನ ಸಾಮಾನ್ಯರಿಗಾಗಿ ಹಲವು ಯೋಜನೆ ಗಳಿದ್ದು ಅರ್ಹ ರೆಲ್ಲರಿಗೂ ಯೋಜನೆಗಳು ತಲುಪು ವಂತಾಗಬೇಕು ಎಂದರು. ವಿದ್ಯಾರ್ಥಿ ನಿಲಯದ ಮಕ್ಕಳ ಫಲಿತಾಂಶದ ಬಗ್ಗೆ, ಬಿಪಿಎಲ್ ಕಾರ್ಡ್‌ ಹಾಗೂ ಆಹಾರ ವಿತರಣೆಯ ಬಗ್ಗೆ ಮಾಹಿತಿ ಪಡೆದು ಕೊಂಡರು. ಜಾಗೃತ ಸಮಿತಿಗಳು ಪರಿಣಾ ಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.ಸ್ನಾತಕೋತ್ತರ ಪದವಿ, ಪದವಿ, ಪಿಯುಸಿ ಹಾಗೂ ವೈದ್ಯಕೀಯ ಕೋರ್ಸ್‌ ಗಳಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ ರಾದ 271 ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ₹ 60.90 ಲಕ್ಷ ಪ್ರೋತ್ಸಾಹ ಧನವನ್ನು ವಿತರಿಸಲಾಗಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ 295 ವಿದ್ಯಾರ್ಥಿ ಗಳಿಗೆ ₹ 65.10 ಲಕ್ಷ ವಿದ್ಯಾರ್ಥಿ ವೇತನ ವಿತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಚ್‌.ಎಸ್‌. ಪ್ರೇಮನಾಥ್‌ ಮಾಹಿತಿ ನೀಡಿದರು.ಕಳೆದ ಸಾಲಿನಲ್ಲಿ ನಿಗಮ ಗುರಿ ಮೀರಿ ಸಾಧನೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಗಂಗಾಕಲ್ಯಾಣ ಹಾಗೂ ಇನ್ನಿತರ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಅಂಬೇಡ್ಕರ್ ನಿಗಮದ ಅಧಿಕಾರಿಗಳು ಹೇಳಿದರು.ಘನ ತ್ಯಾಜ್ಯ ವಿಲೇವಾರಿ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು, ಕಾರ್ಕಳ ಮಾದರಿಯಲ್ಲಿ ಉಳಿದೆಡೆಯೂ ಕಸ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಿ ಎಂದರು. ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಅಂತರ್ಜಲ ವೃದ್ಧಿಗೆ ಮುತುವರ್ಜಿ ವಹಿಸಿ ಕೆಲಸ ಮಾಡಿ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.