ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಕ್ರೈಸ್ತ ಧರ್ಮೀಯರಿಗೆ ಟಿಕೆಟ್ ನೀಡದಿರುವ ಕಾಂಗ್ರೆಸ್ ಪಕ್ಷದ ನಿರ್ಧಾರಕ್ಕೆ ಕ್ರೈಸ್ತ ಮುಖಂಡರ ಆಕ್ಷೇಪ ಮುಂದುವರಿದಿದೆ.

ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಅವರು ಕಾಂಗ್ರೆಸ್ಗೆ ವಿದಾಯ ಹೇಳಲು ಮುಂದಾಗಿರುವ ಬೆನ್ನಲ್ಲೇ, ಮಾಜಿ ಸಚಿವ ಜೆ.ಅಲೆಕ್ಸಾಂಡರ್ ಕೂಡ ಕಾಂಗ್ರೆಸ್ನ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಕ್ರೈಸ್ತ ಧರ್ಮೀಯರಿಗೆ ಯಾವುದೇ ಕ್ಷೇತ್ರದಲ್ಲೂ ಟಿಕೆಟ್ ನೀಡದಿರುವುದರಿಂದ ಸಾಂಗ್ಲಿಯಾನ ಅವರಂತೆ ನನಗೂ ನೋವಾಗಿದೆ. ಪಕ್ಷದ ನಿರ್ಧಾರ ಸರಿಯಾದುದಲ್ಲ.

ಅನೇಕ ಸ್ನೇಹಿತರು ನನಗೆ ದೂರವಾಣಿ ಕರೆಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಕೇಂದ್ರ ಮಾತ್ರವಲ್ಲ ಹಲವು ಕ್ಷೇತ್ರಗಳ ಮೇಲೆ ಈ ವಿಷಯ ಪರಿಣಾಮ ಬೀರಲಿದೆ’ ಎಂದು ಅಲೆಕ್ಸಾಂಡರ್ ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ಬೆಂಗಳೂರು ಕೇಂದ್ರ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳ ಪೈಕಿ ಒಂದು ಕಡೆ ತಮ್ಮವರಿಗೆ ಅವಕಾಶ ದೊರೆಯಬಹುದು ಎಂದು ಕಾಂಗ್ರೆಸ್ನ ಕ್ರೈಸ್ತ ಮುಖಂಡರು ನಿರೀಕ್ಷಿಸಿದ್ದರು. ಆದರೆ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಂಸದ ಎಚ್.ಟಿ.ಸಾಂಗ್ಲಿಯಾನ ಮತ್ತು ಅಲೆಕ್ಸಾಂಡರ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ, ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರಿಗೆ ಪಕ್ಷ ಅವಕಾಶ ನೀಡಿದೆ.

ಉತ್ತರ ಕನ್ನಡ ಕ್ಷೇತ್ರದಲ್ಲಿ ರಾಜಸ್ತಾನದ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಅವರ ಪುತ್ರ ನಿವೇದಿತ್ ಆಳ್ವ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿದ್ದರು. ಆದರೆ, ಅಲ್ಲಿ ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

‘ಬೆಂಗಳೂರು ಕೇಂದ್ರದಲ್ಲಿ ಸಿ.ಕೆ.ಜಾಫರ್ ಷರೀಫ್ ಅವರಿಗೆ ಟಿಕೆಟ್ ನೀಡಿದ್ದರೆ ಕ್ರೈಸ್ತರಿಗೆ ಬೇಸರ ಆಗುತ್ತಿರಲಿಲ್ಲ. ಅವರು ಎಲ್ಲ ಅಲ್ಪಸಂಖ್ಯಾತರ ನಾಯಕ. ಅವರಿಗೆ ಅವಕಾಶ ದೊರೆತಿದ್ದರೆ ತಕರಾರು ಇರುತ್ತಿರಲಿಲ್ಲ. ಆದರೆ, ರಿಜ್ವಾನ್ ಬಗ್ಗೆಯೂ ನನಗೆ ಯಾವುದೇ ವಿರೋಧ ಇಲ್ಲ’ ಎಂದು ಅಲೆಕ್ಸಾಂಡರ್ ಹೇಳಿದರು.

‘ಅನ್ಯಾಯ ಆಗಿಲ್ಲ’
ಕ್ರೈಸ್ತರಿಗೆ ಕಾಂಗ್ರೆಸ್ನಿಂದ ಅನ್ಯಾಯ ಆಗಿದೆ ಎಂಬ ಆರೋಪವನ್ನು ನಿರಾಕರಿಸಿದ ಗೃಹ ಸಚಿವ ಕೆ.ಜೆ.ಜಾರ್ಜ್, ‘ಕಾಂಗ್ರೆಸ್ ಮಾತ್ರ ಎಲ್ಲ ಅಲ್ಪಸಂಖ್ಯಾತರ ಹಿತವನ್ನು ರಕ್ಷಿಸುವ ಪಕ್ಷ. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡದಿರುವುದನ್ನೇ ಆಧರಿಸಿ ಪಕ್ಷ ಅಲ್ಪಸಂಖ್ಯಾತರ ವಿರುದ್ಧವಾಗಿದೆ ಎಂದು ಪರಿಗಣಿಸಲಾಗದು’ ಎಂದು ಹೇಳಿದರು.

‘ನಾನು ಕಾಂಗ್ರೆಸ್ನಲ್ಲೇ ಇರುತ್ತೇನೆ. ಪಕ್ಷಕ್ಕಾಗಿ ದುಡಿಯುತ್ತೇನೆ. ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ನಿವೇದಿತ್ ಆಳ್ವ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.