ಮಂಗಳವಾರ, ಜೂನ್ 15, 2021
23 °C

ಅಲೆಮಾರಿಗಳಿಗೆ ನ್ಯಾಯ: ಇಂದು ವಿಚಾರ ಸಂಕಿರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆಯ (ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ) ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿಯ ಅಧ್ಯಯನ ಕೇಂದ್ರ ಹಾಗೂ ಅಲೆಮಾರಿ ಬುಡಕಟ್ಟು ಮಹಾಸಭಾದ ಜಂಟಿ ಆಶ್ರಯದಲ್ಲಿ ಈ ತಿಂಗಳ 10ರಂದು `ಅಲೆಮಾರಿ ಬುಡಕಟ್ಟುಗಳಿಗೆ ಸಾಮಾಜಿಕ ನ್ಯಾಯ~ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.`ಕರ್ನಾಟಕದಲ್ಲಿ 35ಕ್ಕೂ ಹೆಚ್ಚು ಅಲೆಮಾರಿ ಬುಡಕಟ್ಟುಗಳಿವೆ. ಈ ಬುಡಕಟ್ಟುಗಳು ಅನಕ್ಷರತೆ, ಬಡತನ, ವೇಶ್ಯಾವಾಟಿಕೆ, ಭಿಕ್ಷಾಟನೆ, ಮೂಢನಂಬಿಕೆ, ಕ್ರೌರ್ಯಗಳಿಗೆ ಸಿಲುಕಿ ನರಳುತ್ತಿರುವ ಈ ಬುಡಕಟ್ಟು ಜನರಿಗೆ ವಸತಿ, ಶಿಕ್ಷಣ, ಆಹಾರ ಭದ್ರತೆ ಮತ್ತು ಸಾಮಾಜಿಕ ನ್ಯಾಯ ಮರೀಚಿಕೆಯಾಗಿದೆ. ಶೋಚನೀಯ ಸ್ಥಿತಿಯಲ್ಲಿರುವ ಅಲೆಮಾರಿ ಬುಡಕಟ್ಟುಗಳಿಗೆ ಸಾಂವಿಧಾನಿಕ ಮೀಸಲಾತಿಯ ಸೌಲಭ್ಯಗಳು ಸರಿಯಾಗಿ ಸಿಕ್ಕಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು~ ಎಂದು ಮಹಾಸಭಾ ಅಧ್ಯಕ್ಷ ಬಾಲಗುರುಮೂರ್ತಿ ತಿಳಿಸಿದ್ದಾರೆ.`ಕಾನೂನು ಶಾಲೆಯ ಅಂತರರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ನಾಗಮೋಹನದಾಸ್ ಉದ್ಘಾಟಿಸುವರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಸಿ. ಎಸ್. ದ್ವಾರಕಾನಾಥ್ ಅಧ್ಯಕ್ಷತೆ ವಹಿಸುವರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.