ಬುಧವಾರ, ಮೇ 18, 2022
23 °C

ಅಲೆಮಾರಿ ಜನಾಂಗಕ್ಕೆ ಮೂಲ ಸೌಲಭ್ಯ ಕಲ್ಪಿಸಲು ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಜಿಲ್ಲೆಯಲ್ಲಿ ಸುಮಾರು 30 ವರ್ಷದಿಂದ ವಾಸಿಸುತ್ತಿರುವ ಸುಮಾರು 500 ಪರಿಶಿಷ್ಟ ಜಾತಿ ಹಿಂದುಳಿದ ವರ್ಗಗಳ (ಬುಡ್ಗ ಜಂಗಮ/ಸಿಕ್ಕಲಿಗರ್) ಅಲೆಮಾರಿ ಕುಟುಂಬಗಳಿಗೆ ಮೂಲ ಸೌಲಭ್ಯ ಒದಗಿಸಿಕೊಡಬೇಕು ಎಂದು ಜಿಲ್ಲಾ ಕೊಳೆಗೇರಿ ನಿವಾಸಿಗಳ ಒಕ್ಕೂಟ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ.ಕುಡಿಯುವ ನೀರು, ಮನೆ, ಪಡಿತರ ಚೀಟಿ, ಅಂಗನವಾಡಿ ವ್ಯವಸ್ಥೆ, ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇವರಿಗಾಗಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಿರುವ ಮನೆಗಳು ಕೆಲವು ಪುಢಾರಿಗಳ ಪಾಲಾಗಿವೆ. ಈ ಬಗ್ಗೆ ಜಿಲ್ಲಾಡಳಿತಕ್ಕೆ ಮತ್ತು ಪ್ರತಿನಿಧಿಗಳಿಗೆ  ಮನವಿ ಸಲ್ಲಿಸಿದ್ದರೂ ಯಾವ ಪ್ರಯೋಜನವಾಗಿಲ್ಲ ಎಂದು ಒಕ್ಕೂಟದ ಕಾರ್ಯದರ್ಶಿ ದಂಡಿನಕರ್, ಮುಖಂಡ ಶ್ಯಾಮರಾವ ಸಿಂಧೆ, ಸಂಚಾಲಕ ಅಲ್ಲಂ ಪ್ರಭು ನಿಂಬರ್ಗಾ ಮನವಿಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.