ಮಂಗಳವಾರ, ನವೆಂಬರ್ 19, 2019
29 °C

ಅಲ್ಪಸಂಖ್ಯಾತರಿಗೆ ಟಿಕೆಟ್- ಆಗ್ರಹ

Published:
Updated:

ಬೊಮ್ಮನಹಳ್ಳಿ: ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.ರಾಷ್ಟ್ರೀಯ ಹೆದ್ದಾರಿ- 7ರ ಬೊಮ್ಮನಹಳ್ಳಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಸಂಖ್ಯೆಯ ಅಲ್ಪಸಂಖ್ಯಾತ ಸಮುದಾಯದವರು, `ಕ್ಷೇತ್ರದಲ್ಲಿ 60 ಸಾವಿರ ಅಲ್ಪ ಸಂಖ್ಯಾತ ಮತದಾರರಿದ್ದು ಹಿಂದಿನಿಂದಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಿದ್ದೇವೆ. ಈ ಬಾರಿ ಪಕ್ಷದ ಹಳೆಯ ಕಾರ್ಯಕರ್ತರಿಗೆ ಆದ್ಯತೆ ನೀಡಬೇಕು. ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಟಿಕೆಟ್ ನೀಡಬಾರದು' ಎಂದು ಆಗ್ರಹಿಸಿದರು.ಪಾಲಿಕೆ ಮಾಜಿ ಸದಸ್ಯ ಸೈಯದ್ ಅನ್ಸರ್, ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್‌ನ ಪದಾಧಿಕಾರಿಗಳಾದ ಇನಾಯತ್, ವಜೀರ್, ಶೌಖತ್, ಫಯಾಜ್ ಇದ್ದರು.

ಪ್ರತಿಕ್ರಿಯಿಸಿ (+)