ಶುಕ್ರವಾರ, ಜೂನ್ 25, 2021
29 °C

ಅಲ್ಪಸಂಖ್ಯಾತರ ಶಿಕ್ಷಣ: ಯೋಜನೆ ಜಾರಿಗೆ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದಹೆಲಿ: ಅಲ್ಪಸಂಖ್ಯಾತ ಸಮುದಾಯದವರ ಶೈಕ್ಷಣಿಕ ಮಟ್ಟವನ್ನು ಸುಧಾರಿಸಲು ಇರುವ ಯೋಜನೆಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರಗಳು ವಿಫಲಗೊಂಡಿವೆ ಎಂದು ಕೇಂದ್ರ ಸೋಮವಾರ ಅಭಿಪ್ರಾಯಪಟ್ಟಿದೆ.ಎನ್‌ಎಂಸಿಎಂಇ (ಅಲ್ಪಸಂಖ್ಯಾತ ಶಿಕ್ಷಣ ಕುರಿತ ರಾಷ್ಟ್ರಿಯ ನಿಗಾ ಮಂಡಳಿ)ಸಭೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಕಪಿಲ್ ಸಿಬಲ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.`ಕೇಂದ್ರದ ಹೆಚ್ಚಿನ ಎಲ್ಲಾ ಯೋಜನೆಗಳು ರಾಜ್ಯ ಸರ್ಕಾರದ ಮೂಲಕವೇ ಜಾರಿಗೊಳ್ಳಬೇಕಾಗಿರುವುದರಿಂದ ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸಬೇಕು~ ಎಂದು ಕಪಿಲ್ ಸಿಬಲ್ ಒತ್ತಿ ಹೇಳಿದರು.ಈ ಹಿನ್ನೆಲೆಯಲ್ಲಿ ಸಮಸ್ಯೆಗಳನ್ನು ಪತ್ತೆಹಚ್ಚಿ ಸೂಕ್ತ ಪರಿಹಾರ ಮಾರ್ಗಗಳನ್ನು ಕಂಡುಹುಡುಕುವಲ್ಲಿ ಸಹಾಯವಾಗುವಂತೆ ಐದು ಉಪ ಸಮಿತಿಗಳನ್ನು ರಚಿಸಲಾಗುವುದು ಎಂದು ಸಿಬಲ್ ನೇತೃತ್ವದ ತಂಡವು ನಿರ್ಧರಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.