ಗುರುವಾರ , ಮೇ 6, 2021
33 °C

ಅಲ್ಪಸಂಖ್ಯಾತ ಭಾಷೆಯಲ್ಲಿತುಳುವಿಗೆ ಅಗ್ರಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುತ್ತೂರು: `ದೇಶದಲ್ಲಿ 100 ಅಲ್ಪಸಂಖ್ಯಾತ ಭಾಷೆಗಳಿದ್ದು, ಈ ಪೈಕಿ ಅತೀ ಹೆಚ್ಚು ಜನ ಸಮುದಾಯವನ್ನು ಒಳಗೊಂಡ ತುಳು ಭಾಷೆಯೇ ಅಗ್ರಸ್ಥಾನದಲ್ಲಿದೆ~ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಾಲ್ತಾಡಿ ರಾಮಕೃಷ್ಣ ಆಚಾರ್ ಹೇಳಿದರು.ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ವಠಾರದಲ್ಲಿ ಅಕ್ಟೋಬರ್ 7-8ರಂದು ನಡೆಯಲಿರುವ ಅಖಿಲ ಭಾರತ ತುಳು ಸಮ್ಮೇಳನ ಪೂರ್ವತಯಾರಿ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಲಿದ್ದು, ವಿಶ್ರಾಂತ ಕುಲಪತಿ ವಿವೇಕ ರೈ ಪ್ರಧಾನ ಭಾಷಣ ಮಾಡುವರು. ಸಚಿವ ವಿ.ಎಸ್.ಆಚಾರ್ಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು ಎಂದು ಅವರು ತಿಳಿಸಿದರು.ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರು ಕರ್ನಾಟಕ ಸಂಘ ಅಧ್ಯಕ್ಷರಾದ ಸಾಹಿತಿ ಬಿ.ಪುರಂದರ ಭಟ್ ಮತ್ತು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ಬಿ.ಜೆ.ಸುವರ್ಣ ಪ್ರಚಾರದ ಬ್ಯಾನರ್ ಬಿಡುಗಡೆ ಮಾಡಿದರು.ಅಕಾಡೆಮಿ ಸದಸ್ಯರಾದ ಆಶೋಕ್ ಶೆಟ್ಟಿ ಸರಪ್ಪಾಡಿ, ಉದಯ ಧರ್ಮಸ್ಥಳ, ಪ್ರೇಮಲತಾ ರಾವ್, ಸ್ವಾಗತ ಸಮಿತಿ ಉಪಾಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಹೆಬ್ಬಾರಬೈಲು ಮತ್ತಿತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.