ಬೆಂಗಳೂರು: ಶೇ 75 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಇರುವ ಶಾಲೆಗಳನ್ನು ಮಾತ್ರ `ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ~ಗಳು ಎಂದು ಪರಿಗಣಿಸುವ ಸರ್ಕಾರದ ತೀರ್ಮಾನ ಅಲ್ಪಸಂಖ್ಯಾತರ ವಿರೋಧಿಯಾಗಿದೆ. ಇದನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ಕರ್ನಾಟಕ ಅನುದಾನರಹಿತ ಅಲ್ಪಸಂಖ್ಯಾತರ ಶಾಲೆಗಳ ಒಕ್ಕೂಟದ ಅಧ್ಯಕ್ಷ ಡಾ.ಗುಲ್ಷಾದ್ ಅಹಮದ್ ತಿಳಿಸಿದರು.

`ಈ ಬಗ್ಗೆ ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ತೀರ್ಮಾನವನ್ನು ಪುನರ್ಪರಿಶೀಲಿಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಮಾಡುತ್ತೇವೆ. ನಮ್ಮ ಮನವಿಗೆ ಸ್ಪಂದಿಸದೆ ಇದ್ದರೆ ಹೈಕೋರ್ಟ್ ಮೊರೆ ಹೋಗುತ್ತೇವೆ~ ಎಂದು ಅವರು ಹೇಳಿದರು.

ಶಾಲೆಯ ವ್ಯಾಪ್ತಿಯಲ್ಲಿ ಬರುವ ಬಡಾವಣೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಶೇ 75ರಷ್ಟು ಮಕ್ಕಳು ಇರಲು ಸಾಧ್ಯವೇ ಇಲ್ಲ ಎಂದು ನಗರದ ಡೆಲ್ಲಿ ಪಬ್ಲಿಕ್ ಶಾಲೆಯ ಆಡಳಿತ ಮಂಡಳಿ ನಿರ್ದೇಶಕ ಮನ್ಸೂರ್ ಅಲಿ ಖಾನ್ ಹೇಳಿದರು.

`ಮದರಸಾ~ಗಳನ್ನು ಹೊರತುಪಡಿಸಿ ಬೇರೆ ಯಾವ ಶಾಲೆಯಲ್ಲೂ ಶೇ 75ರಷ್ಟು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಇರಲು ಸಾಧ್ಯವಿಲ್ಲ ಎಂದು ಹೇಳಿದರು.

ಬಂದ್ ಖಚಿತ- `ಕುಸ್ಮಾ~

`ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳನ್ನು ಗುರುತಿಸುವ ಸಂಬಂಧ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹ. ಆದರೆ, ಒಂದೇ ರಾಷ್ಟ್ರ- ಒಂದೇ ಕಾನೂನು ಎಂಬ ನೀತಿ ಜಾರಿಯಾಗಬೇಕು ಎಂಬುದು ನಮ್ಮ ವಾದ~ ಎಂದು ಕರ್ನಾಟಕ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ. ಮರಿಯಪ್ಪ ತಿಳಿಸಿದರು.

ಇದೇ 16ರಿಂದ 22ರವರೆಗೆ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಶೇ 25ರಷ್ಟು ಸೀಟುಗಳನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಮಕ್ಕಳಿಗೆ ನೀಡಬೇಕು ಎಂಬ ತೀರ್ಮಾನವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.