ಭಾನುವಾರ, ಏಪ್ರಿಲ್ 11, 2021
21 °C

ಅಲ್ಪ ಮೊತ್ತಕ್ಕೆ ಕುಸಿದ ಪಾಕ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಲ್ಲೆಕೆಲೆ (ಪಿಟಿಐ): ತಿಸ್ಸಾರ ಪೆರೇರಾ (63ಕ್ಕೆ4) ಅವರ ಪ್ರಭಾವಿ ಬೌಲಿಂಗ್ ದಾಳಿಯ ಪರಿಣಾಮ ಪಾಕಿಸ್ತಾನ ತಂಡದವರು ಭಾನುವಾರ ಇಲ್ಲಿ ಆರಂಭವಾದ ಶ್ರೀಲಂಕಾ ವಿರುದ್ಧದ ಟೆಸ್ಟ್  ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ ಅಲ್ಪ ಮೊತ್ತಕ್ಕೆ ಕುಸಿತ ಕಂಡಿದ್ದಾರೆ.ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 72.5 ಓವರ್‌ಗಳಲ್ಲಿ 226 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು. ಇದಕ್ಕೆ ಉತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿರುವ ಲಂಕಾ ಕೂಡ ಆರಂಭಿಕ ಆಘಾತ ಅನುಭವಿಸಿತು. ಈ ತಂಡದವರು ಮೊದಲ ದಿನದಾಟದ ಅಂತ್ಯಕ್ಕೆ 14.4 ಓವರ್‌ಗಳಲ್ಲಿ 3 ವಿಕೆಟ್‌ಗೆ 44 ರನ್ ಗಳಿಸಿದ್ದಾರೆ.ಸಂಕ್ಷಿಪ್ತ ಸ್ಕೋರ್: ಪಾಕಿಸ್ತಾನ: ಮೊದಲ ಇನಿಂಗ್ಸ್ 72.5 ಓವರ್‌ಗಳಲ್ಲಿ 226 (ಮಿಸ್ಬಾ ಉಲ್ ಹಕ್ 40, ಅಸಾದ್ ಶಫಿಕ್ 75; ನುವಾನ್ ಕುಲಶೇಖರ 44ಕ್ಕೆ2, ತಿಸ್ಸಾರ ಪೆರೇರಾ 63ಕ್ಕೆ4, ರಂಗನಾ ಹೇರತ್ 40ಕ್ಕೆ3); ಶ್ರೀಲಂಕಾ: ಮೊದಲ ಇನಿಂಗ್ಸ್ 14.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 44 (ತರಂಗ ಪರಣವಿತನಾ ಬ್ಯಾಟಿಂಗ್ 13; ಜುನೈದ್ ಖಾನ್ 15ಕ್ಕೆ2).

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.