ಶನಿವಾರ, ಏಪ್ರಿಲ್ 17, 2021
31 °C

ಅವಧಿಗೆ ಮೊದಲೇ ಚುನಾವಣೆಗೆ ಸಿದ್ಧ ಜಗದೀಶ ಶೆಟ್ಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು:  `ಕೇಂದ್ರ ಚುನಾವಣಾ ಆಯೋಗವು ಫೆಬ್ರುವರಿ ತಿಂಗಳಲ್ಲೇ ಚುನಾವಣೆ ನಡೆಸಿದರೆ ಅದಕ್ಕೆ ಬಿಜೆಪಿ ಸಿದ್ಧ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೋಮವಾರ ತಿಳಿಸಿದರು.ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಶೆಟ್ಟರ್ ಅವರು, ಲಲಿತ ಮಹಲ್ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಇದರಲ್ಲಿ  ಅನುಮಾನ ಬೇಡ. ಮೊದಲೇ ಚುನಾವಣೆ ನಡೆದರೂ ಚಿಂತೆ ಇಲ್ಲ~ ಎಂದರು.`ಬಿಜೆಪಿ ವರಿಷ್ಠ ಅಡ್ವಾಣಿ ವಿರುದ್ಧ ಖಾರವಾಗಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದು ಉತ್ತಮ ಬೆಳವಣಿಗೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

`ವಿಧಾನಸಭಾ ಕ್ಷೇತ್ರಗಳ ಆಧಾರದ ಮೇಲೆ ತಾಲ್ಲೂಕು ರಚನೆ ಆಗಬೇಕು ಎಂಬುದರ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ವಿಧಾನಸಭಾ ಕ್ಷೇತ್ರಗಳನ್ನು ತಾಲ್ಲೂಕುಗಳಾಗಿ ಮಾಡಬೇಕು ಎಂಬುದು ಸ್ಥಳೀಯ ಜನರ ಆಶಯವಾಗಿದೆ. ತಾಲ್ಲೂಕುಗಳ ರಚನೆಗೆ ಸಂಬಂಧಿಸಿದಂತೆ ಶೀಘ್ರವೇ ಸಂಪುಟ ಉಪ ಸಮಿತಿ ರಚಿಸಲಾಗುವುದು~ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.