ಮಂಗಳವಾರ, ಜೂನ್ 15, 2021
21 °C

ಅವಧಿ ಮೀರಿ ಸೇವೆ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಆಯುರ್ವೇದ, ಸಿದ್ಧ ಹಾಗೂ ಯುನಾನಿ ಪದ್ಧತಿಗೆ ಸಂಬಂಧಿಸಿದಂತೆ ಭಾರತೀಯ ವೈದ್ಯಕೀಯ ಮಂಡಳಿಯ ಚುನಾಯಿತ ಪದಾಧಿಕಾರಿಗಳು ಐದು ವರ್ಷಗಳ ತಮ್ಮ ಸೇವಾವಧಿ ಮುಗಿದ ಮೂರು ತಿಂಗಳ ನಂತರವೂ ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮಂಡಳಿ ಪದಾಧಿಕಾರಿಗಳ ಆಯ್ಕೆಗೆ ಸರ್ಕಾರವು ದೀರ್ಘ ಕಾಲದಿಂದಲೂ ಚುನಾವಣೆ ನಡೆಸಿಲ್ಲ ಎಂದು ಆರೋಪಿಸಿ ಕೆ.ಬಿ.ನಾಗೂರು ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ  ಎಸ್.ಎಚ್.ಕಪಾಡಿಯ ಅವರನ್ನು ಒಳಗೊಂಡ ಪೀಠವು ಹೀಗೆ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.